ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೊಜನೆಯಡಿ ರೈತರಿಂದ ಭತ್ತ ಖರೀದಿಸುವ ಸಲುವಾಗಿ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲು ಪೂರ್ವ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಧಾನ್ಯ ಖರೀದಿಸುವ ಸಂಬಂಧ ನಡೆದ ಜಿಲ್ಲಾ ಟಾಸ್ಕ್ಪೊರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. 2020-21ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತವನ್ನು ಪ್ರತೀ ಕ್ವಿಂಟಾಲ್‍ಗೆ 1ಸಾವಿರದ 868 ರೂಪಾಯಿ ಹಾಗೂ ಗ್ರೇಡ್-ಎ ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 1 ಸಾವಿರದ 888 ರೂಪಾಯಿ ದರದಲ್ಲಿ ಖರೀದಿಸಲು ಸರ್ಕಾರ ಆದೇಶಿಸಿದೆ. ಚಾಮರಾಜನಗರ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾ ಮಂಡಳಿಯನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗಾಗಿ ರೈತರ ನೊಂದಣಿಯನ್ನು ಈ ತಿಂಗಳ 30ರಿಂದ ಆರಂಭಿಸಿ ಡಿಸ0ಬರ್ 30ರವರೆಗೆ ನಡೆಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ