ಕಾನೂನು ಸೇವಾ ಪ್ರಾಧಿಕಾರದಿಂದಾಗುವ ಪ್ರಯೋಜನಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಲಯದ ಸಭಾಭವನದಲ್ಲಿಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಧಿಕಾರದ ಮೂಲಕ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದರ ಜೊತೆಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸರಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾನೂನು ಸೇವಾ ಪ್ರಾಧಿಕಾರವು ಕರ್ನಾಟಕ ರಾಜ್ಯದಲ್ಲಿ 1995, ನವೆಂಬರ 9 ರಂದು ಅಸ್ತಿತ್ವಕ್ಕೆ ಬಂದಿದ್ದು, ಈ ದಿನವನ್ನು ಪ್ರಾಧಿಕಾರದ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ