ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯ ತಡೆ ಕಾಯ್ದೆಯಲ್ಲಿನ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ.5 ರಿಂದ 6 ರಷ್ಟಿವೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು.
ಬೆಂಗಳೂರಿನಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆಯು ದೌರ್ಜನ್ಯ ಪ್ರತಿಬಂಧ ಅನಿಯಮದಡಿ ಏರ್ಪಡಿಸಿದ್ದ ರಾಜ್ಯಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಪೊಲೀಸ್ ಅಕಾರಿಗಳು ದೌರ್ಜನ್ಯ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಬೇಕು ಮತ್ತು ಸಂಬಂಸಿದ ಸೆಕ್ಷನ್ಗಳನ್ನು ಅನುಮೋದಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸ್ ಅಕಾರಿಗಳಿಂದ 60 ದಿನಗಳೊಳಗೆ ತನಿಖೆ ಮುಗಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಬಗ್ಗೆ ಕ್ರಮವಹಿಸಲು ಮತ್ತು ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಜಾಗರೂಕತೆ ವಹಿಸಬೇಕು. ಅಲ್ಲದೇ ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸುವ ಸಂದರ್ಭವನ್ನೂ ವಿಡಿಯೋ ರೆಕಾರ್ಡಿಂಗ್ ಮಾಡಲು ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಪ್ರಸ್ತುತ ದೌರ್ಜನ್ಯ ಪ್ರತಿಬಂಧ ಅನಿಯಮದಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಪಂಚನಾಮೆ ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ವಿಡಿಯೋ ರೆಕಾರ್ಡಿಂಗ್ ನಡೆಸಲಾಗುತ್ತಿದೆ. ದೂರು ಸಲ್ಲಿಸಲು ಬಂದ ಸಂತ್ರಸ್ತರ ಹಾದಿ ತಪ್ಪಿಸುವ ಸಾಧ್ಯತೆಗಳನ್ನು ತಪ್ಪಿಸಲು ದೂರು ನೀಡುವ ಸಂದರ್ಭದಲ್ಲಿಯೂ ವಿಡಿಯೋ ರೆಕಾರ್ಡಿಂಗ್ ನಡೆಸುವಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡುವಂತೆ ತಿಳಿಸಿದರು.
ಸಂತ್ರಸ್ತರಿಗೆ ಉದ್ಯೋಗ ನೀಡುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಗಳಿಗೆ ತಿರಸ್ಕರಿಸದಿರುವಂತೆ ಅಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಮತ್ತು ಉಪ ವಿಭಾಗೀಯ ಮಟ್ಟದಲ್ಲಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಕಾರಿಗಳು ಮತ್ತು ಸಹಾಯಕ ಆಯುಕ್ತರು ಕಡ್ಡಾಯವಾಗಿ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕೆಂದರು.
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ , ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಇದ್ದರು.