ಲಖನೌ: ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್(84) ಅವರ ಆರೋಗ್ಯ ಗಂಭೀರಸ್ಥಿತಿಯಲ್ಲಿ ಮುಂದುವರಿದಿದೆ ಎಂದು ಹಿರಿಯ ವೈದ್ಯರು ಬುಧವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಕೇಶವ ಪ್ರಸಾದ್ ಮೌರ್ಯ ಅವರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ, ಮಹಾಂತ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯ ವಿಚಾರಿಸಿದರು.
ಮಹಾಂತ ನೃತ್ಯ ಗೋಪಾಲ್ ದಾಸ್ ಅವರಿಗೆ ಮಂಗಳವಾರ ಡಯಾಲಿಸಿಸ್ ನಡೆಲಾಗಿದೆ. ಅವರ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಕ್ಷೀಣಿಸುತ್ತಿದೆ. ಸದ್ಯ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿಲ್ಲ. ಹೆಚ್ಚುವರಿ ವ್ಯವಸ್ಥೆಯನ್ನೂ ನೀಡಲಾಗಿಲ್ಲ. ಮತ್ತೊಮ್ಮೆ ಡಯಾಲಿಸಿಸ್ ನಡೆಲಾಗುತ್ತಿದೆ ಎಂದು ಆಸ್ಪತ್ರೆಯ ನಿರ್ದೇಶಕ ರಾಕೇಶ್ ಕಪೂರ್ ತಿಳಿಸಿದ್ದಾರೆ.
ಥರ್ಮೋಎಂಬಾಲಿಸಮ್ ಕಾರಣ ಮಹಾಂತ ನೃತ್ಯ ಗೋಪಾಲ್ ದಾಸ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಮಹಾಂತರಿಗೆ ಸೋಮವಾರ ಉಸಿರಾಟ ತೊಂದರೆ ಉಂಟಾದ ಕಾರಣ ಅಯೋಧ್ಯೆಯಲ್ಲಿನ ಸರ್ಕಾರಿ ಶ್ರೀರಾಮ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಅವರ ಆರೋಗ್ಯಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಲಖನೌದ ಮೇದಾಂತ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಶಿಫಾರಸು ಮಾಡಿದ್ದರು.