ಕುಟುಂಬ ರಾಜಕಾರಣದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಕುಟುಂಬ ಆಧಾರಿತ ಪಕ್ಷಗಳು ದೇಶಕ್ಕೆ ಮಾರಕ

ಹೊಸದಿಲ್ಲಿ: ಭಾರತದ ಪ್ರಜಾಪ್ರಭುತ್ವಕ್ಕೆ ಕುಟುಂಬ ಆಧಾರಿತ ಪಕ್ಷಗಳು ಬಹುದೊಡ್ಡ ಮಾರಕವಾಗಿ ಪರಿಣಮಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ದೊರೆತ ಅಭೂತಪೂರ್ವ ಗೆಲುವಿನ ಹಿನ್ನೆಲೆ ಪಕ್ಷದ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಮೋದಿಯವರು, ಕುಟುಂಬ ರಾಜಕಾರಣಕ್ಕೆ ರಾಷ್ಟ್ರೀಯ ಪಕ್ಷವೊಂದು ಸಹ ಬಲಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ವಿಪಕ್ಷಗಳು ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದರೆ, ಎಲ್ಲರ ಬೆಂಬಲ, ಎಲ್ಲರ ವಿಕಾಸ ಮತ್ತು ಎಲ್ಲರ ವಿಶ್ವಾಸ (ಸಬ್‍ಕಾ ಸಾಥ್, ಸಬ್‍ಕಾ ವಿಕಾಸ್ ಮತ್ತು ಸಬ್‍ಕಾ ವಿಶ್ವಾಸ್) ಈ ಧ್ಯೇಯ ವಾಕ್ಯದ ಆಧಾರದ ಮೇಲೆ ತಮ್ಮ ಪಕ್ಷ ಗೆಲುವು ಸಾಸಿದೆ ಎಂದು ಮೋದಿ ತಿಳಿಸಿದರು.
ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ದುಡಿಯುವವರನ್ನಷ್ಟೇ ಈಗ ಜನರು ಬೆಂಬಲಿಸುತ್ತಾರೆ ಎನ್ನುವುದು ಬಿಹಾರ ಮತ್ತು ಇತರೆ ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಸ್ಪಷ್ಟವಾಗಿದೆ. 21ನೇ ಶತಮಾನದಲ್ಲಿ ರಾಷ್ಟ್ರೀಯ ರಾಜಕಾರಣದ ಆಧಾರ ಅಭಿವೃದ್ಧಿಯೊಂದೇ ಎನ್ನುವುದನ್ನು ಜನರು ನಿರ್ಧರಿಸಿದ್ದಾರೆ ಎಂದರು.
ಪ್ರಜಾಸತ್ತಾತ್ಮಕವಾಗಿ ಬಿಜೆಪಿಯೊಂದಿಗೆ ಹೋರಾಟ ಮಾಡದಿರುವವರು ತಮ್ಮ ಪಕ್ಷದ ಕಾರ್ಯಕರ್ತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ. ಆದರೆ, ಈ ಕಗ್ಗೊಲೆಯ ಆಟ ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ ಎಂದು ಕುಟುಂಬ ರಾಜಕಾರಣದ ವಿರುದ್ಧ ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ