ಸಕ್ರಿಯ ಸೋಂಕಿತರ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆ

ಹೊಸದಿಲ್ಲಿ :ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಭದ್ರವಾಗಿ ಕಾಲೂರಿದ್ದು,ಈಗಾಗಲೇ ಹಲವು ಮೈಲಿಗಲ್ಲುಗಳನ್ನು ದಾಟಿದೆ ಜತೆಗೆ ಸತತ ಚೇತರಿಕೆ ಪ್ರಕರಣಗಳಿಂದಾಗಿ 106 ದಿನಗಳ ನಂತರ ಇದೇ ಮೊದಲ ಬಾರಿಗೆ ಸಕ್ರಿಯ ಸೋಂಕಿತರ ಸಂಖ್ಯೆ 5ಲಕ್ಷಕ್ಕಿಂತಲೂ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಜುಲೈ 28ರಂದು ಸಕ್ರಿಯ ಸೋಂಕಿತರ ಸಂಖ್ಯೆ 4,96,988 ಆಗಿತ್ತು ಆ ಬಳಿಕ ಇದೇ ಮೊದಲ ಬಾರಿಗೆ ಮತ್ತೆ 5 ಲಕ್ಷಕ್ಕಿಂತ ಕಡಿಮೆ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಸಕ್ರಿಯ ಸೋಂಕಿತರ ಸಂಖ್ಯೆ ಶೇ.5.73ರಷ್ಟಿದೆ.

ಜಾಗತಿಕ ಮಟ್ಟದಲ್ಲಿ ಹಲವು ದೇಶಗಳಲ್ಲಿ ಹೊಸ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚೇತರಿಕೆ ಹೊಂದುತ್ತಿರುವವರ ಸಂಖ್ಯೆ ಹೆಚ್ಚುವುದರ ಜತೆಗೆ ಸಕ್ರಿಯ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿರುವ ಬೆಳವಣಿಗೆ ಅತ್ಯಂತ ಆಶಾದಾಯಕವಾಗಿದೆ ಎಂದು ಅಕಾರಿಗಳು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ