ಹಲವು ರಾಜ್ಯಗಳಲ್ಲಿ ಪಟಾಕಿ ಬಳಕೆ ನಿಷೇಧ

ಹೊಸದಿಲ್ಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಲ ರಾಜ್ಯಗಳು ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಸಿದ್ದರೆ, ಉಳಿದ ರಾಜ್ಯಗಳು ಆಮದು ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿವೆ.
ನ. 9ರಿಂದ 30ರವರೆಗೆ ಎಲ್ಲ ಬಗೆಯ ಪಟಾಕಿಗಳ ಮಾರಾಟ ಮತ್ತು ಸಿಡಿಸುವುದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾೀಕರಣ (ಎನ್‍ಜಿಟಿ) ಸೋಮವಾರ ಸಂಪೂರ್ಣ ನಿಷೇಧ ಹೇರಿತ್ತು.
ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಕೊರೋನ ವೈರಸ್ ಪಿಡುಗಿನ ಹಿನ್ನೆಲೆಯಲ್ಲಿ ಪಟಾಕಿಗಳ ಮಾರಾಟಕ್ಕೆ ಕೆಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿಷೇಧ ಹೇರಿವೆ.
ದಿಲ್ಲಿಯಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ನ.30ರವರೆಗೆ ಎಲ್ಲ ಬಗೆಯ ಪಟಾಕಿಗಳಿಗೆ ನಿಷೇಧ ಹೇರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಷೇಧ ಕುರಿತ ಹೈಕೋರ್ಟ್ ತೀರ್ಪನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ಚಂಡಿಘಡದಲ್ಲಿ ಯಾವುದೇ ಸಡಿಲಿಕೆ ಇಲ್ಲದೇ ನಿಷೇಧ ಹೇರಲಾಗಿದೆ. ಹರಿಯಾಣ ರಾಜ್ಯ ಸರ್ಕಾರವು ಹೊಸ ಆದೇಶ ಹೊರಡಿಸಿ ಎಲ್ಲ ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಸಿದೆ. ಆಸ್ಸಾಂನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ತಿಂಗಳ ಅಂತ್ಯದವರೆಗೆ ಪಟಾಕಿ ಮಾರಾಟ/ಬಳಕೆಯನ್ನು ಸಂಪೂರ್ಣವಾಗಿ ನಿಷೇಸಿದೆ. ಉತ್ತರ ಪ್ರದೇಶ ಆಡಳಿತವು ಲೇಸರ್ ದೀಪಗಳು ಮತ್ತು ಹಸಿರು ಪಟಾಕಿಗಳನ್ನು ಬಳಸಬೇಕೆಂದು ಆದೇಶ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ