ಗ್ರಾಪಂ ಚುನಾವಣೆ: ಇಸಿಗೆ 3ವಾರ ಗಡುವು ನೀಡಿದ ಹೈ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಅವ ಮುಗಿದ ಗ್ರಾಮ ಪಂಚಾಯತ್‍ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್.ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ಅ.23ಕ್ಕೆ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು.
ಸಂವಿಧಾನದ ವಿ 243ರ ಪ್ರಕಾರ ಚುನಾಯಿತ ಸಂಸ್ಥೆಗಳಿಗೆ ಅವ ಮುಗಿಯುವ ಮುನ್ನ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ ಎಂದು ಹೇಳಿದ್ದಲ್ಲದೆ, ಚುನಾವಣೆ ನಡೆಸುವುದರಲ್ಲಿ ಸರ್ಕಾರದ ನಿಲುವು ಮುಖ್ಯವಲ್ಲ. ಒಂದು ವೇಳೆ ಅನಿವಾರ್ಯ ಸಂದರ್ಭದಲ್ಲಿ ಮುಂದೂಡುವುದೇ ಆದರೆ ಅದನ್ನು ಚುನಾವಣಾ ಆಯೋಗವೇ ನಿರ್ಧರಿಸಬೇಕು. ಹೀಗಾಗಿ ಚುನಾವಣಾ ಆಯೋಗ ಮುಂದಿನ ಮೂರು ವಾರಗಳಲ್ಲಿ ಚುನಾವಣಾ ದಿನಾಂಕ ಪ್ರಕಟಿಸುವ ಸಂಬಂಧ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದೆ.ಆಯೋಗಕ್ಕೆ ಅಗತ್ಯವಿರುವ ಹಣಕಾಸು ಮತ್ತು ಇತರೆ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಒದಗಿಸಿಕೊಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.
ರಾಜ್ಯದಲ್ಲಿ ಬಾಕಿಯಿರುವ 5,800 ಗ್ರಾಮ ಪಂಚಾಯತ್‍ಗಳ ಚುನಾವಣೆಯನ್ನು ನಡೆಸಬೇಕು. ಚುನಾವಣಾ ಪ್ರಕ್ರಿಯಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಹೈಕೋರ್ಟ್, ಚುನಾವಣಾ ಕಾರ್ಯಕ್ಕೆ ಸಿಬ್ಬಂದಿ ಅವಶ್ಯಕತೆ ಇದ್ದರೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ