ಇಂದು ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ

ಹೊಸದಿಲ್ಲಿ: ವಿವಿಧ ರಾಜ್ಯಗಳಲ್ಲಿರುವ ಕೊರೋನಾ ಪರಿಸ್ಥಿತಿ, ಕೊರೋನಾ ಲಸಿಕೆಯ ತಯಾರಿಕೆ ಹಾಗೂ ವಿತರಣೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಮುಖ್ಯಮಂತ್ರಿಗಳ ಸಭೆ ಕರೆದಿ. ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಯಲಿದ್ದು, ಮೊದಲಿಗೆ ವಿವಿಧ ರಾಜ್ಯಗಳಲ್ಲಿರುವ ಕೊರೋನಾ ಸೋಂಕು ಹರಡುವಿಕೆಯ ಪ್ರಮಾಣದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಇನ್ನು ದೇಶದಲ್ಲಿ ತಯಾರಾಗುತ್ತಿರುವ ಲಸಿಕೆ ಯಾವ ಹಂತದಲ್ಲಿದೆ? ಯಾವಾಗ ಅದು ಜನರ ಉಪಯೋಗಕ್ಕೆ ಸಿಗಬಹುದು? ಎರಡನೇ ಅಥವಾ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳು ಹೇಗೆ ನಡೆಯುತ್ತಿವೆ? ಲಸಿಕೆ ಲಭ್ಯವಾದ ಬಳಿಕ ಅದರ ವಿತರಣೆ ಹೇಗಿರಬೇಕೆಂದು ಸಮಾಲೋಚನೆ ಮಾಡಲಾಗುತ್ತದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ರೀತಿಯ ಪ್ರತ್ಯೇಕ ಸಭೆಗಳನ್ನು ನಡೆಸಲಿ. ಅವುಗಳನ್ನು ಮುಖ್ಯಮಂತ್ರಿಗಳ ಜೊತೆ ಹಾಗೂ ರಾಜ್ಯಗಳ ಪ್ರತಿನಿಯ ಜೊತೆ ಎಂದು ವರ್ಗೀಕರಿಸಲಾಗಿರುತ್ತದೆ. ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ರಾಜ್ಯಗಳ ವಿಷಯದಲ್ಲಿ ಮಾತ್ರ ಮುಖ್ಯಮಂತ್ರಿಗಳೊಂದಿಗೇ ಚರ್ಚೆ ನಡೆಸುವ ಸಾಧ್ಯತೆ ಇದೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯ ರಚಿಸಿರುವ ಲಸಿಕೆ ಕಾರ್ಯಪಡೆಯು ತುರ್ತು ಬಳಕೆಯ ದೃಢೀಕರಣಕ್ಕಾಗಿ ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿತ್ತು. ಆದರೆ, ಲಸಿಕೆ ತಯಾರಿಕೆ ಬಗ್ಗೆ ರಚಿಸಲಾಗಿರುವ ನ್ಯಾಷನಲ್ ಎಕ್ಸ್‍ಪರ್ಟ್ ಗ್ರೂಪ್, ಕೊರೋನಾ ಲಸಿಕೆ ಮಾರುಕಟ್ಟೆಗೆ ಬರುವ ಮುನ್ನ ನಿಯಮಗಳನ್ನು ರೂಪಿಸಲು ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರದ ಸಭೆಯು ಮಹತ್ವ ಪಡೆದುಕೊಂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ