ಸಚಿವ ಪ್ರಭು ಚವ್ಹಾಣ ಹೇಳಿಕೆ ಚಳಿಗಾಲದ ಅವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಯಾದಗಿರಿ : ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ತಮ್ಮ ಸಂತಸವನ್ನು ವ್ಯಕ್ತ ಪಡಿಸಿದ್ದಾರೆ.
ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಸಹ ನಡೆಸಲಾಗಿದ್ದು, ಇದೇ ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು ಅದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಬೇರೆ ಬೇರೆ ರಾಜ್ಯಗಳಲ್ಲಿ ಅನುಷ್ಠಾನಗೊಂಡ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು ಈ ಬಗ್ಗೆ ಇಲಾಖಾ ಅಕಾರಿಗಳ ಮಟ್ಟದಲ್ಲಿ ಹಾಗೂ ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದ್ದು ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಸಂಪೂರ್ಣ ನಿಷೇಧ ಆಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ