
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರಲ್ಲೇ ಒಳಜಗಳವಿತ್ತು. ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಯಡಿಯೂರಪ್ಪ ಬದಲಾವಣೆ ಕನಸು ಯಾವಾಗ ಬಿತ್ತು. ಹಗಲುಗನಸೋ ಇರುಳುಗನಸೋ? ನಮ್ಮ ನಾಯಕರು ಮುಖ್ಯಮಂತ್ರಿ ಬದಲಾವಣೆ ಇಲ್ಲವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಮೊದಲು ಅವರ ತಟ್ಟೆಯಲ್ಲಿ ಏನಿದೆ ಅದನ್ನು ನೋಡಿಕೊಳ್ಳಲಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.