ಇಂದಿನಿಂದ ವೈದ್ಯಕೀಯ ಕಾಲೇಜುಗಳ ಆರಂಭ

ಬೆಂಗಳೂರು: ರಾಜ್ಯದಲ್ಲಿ ಡಿ.1ರ ಮಂಗಳವಾರದಿಂದ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿದ್ದು, ರಾಜೀವ್ ಗಾಂ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಎಲ್ಲಾ ಕಾಲೇಜುಗಳು ಮಂಗಳವಾರದಿಂದ ತರಗತಿಗಳನ್ನು ಆರಂಭಿಸಲಿವೆ.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಕೋವಿಡ್ ಮುಂಜಾಗ್ರತಾ ಕ್ರಮವನ್ನು ವಹಿಸಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದ್ದು ಅದರಂತೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಹಾಗೂ ಬಾರದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮುಖಾಂತರ ತರಗತಿ ನಡೆಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಕಾಲೇಜಿಗೆ ಹಾಜರಾಗಲು ಒತ್ತಾಯ ಮಾಡುವಂತಿಲ್ಲ. ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸ್ಯಾನಿಟೈಸಿಂಗ್, ಹಾಜರಾತಿ ಮತ್ತು ತರಬೇತಿ ನಿಯಮಗಳನ್ನು ಪಾಲಿಸುವ ಕುರಿತು ಈಗಾಗಲೇ ವಿಶ್ವವಿದ್ಯಾಲಯ ಕಾಲೇಜುಗಳಿಗೆ ಸೂಚಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ