ಬೆಂಗಳೂರು: ಮೆಕಾಲೆ ಶಿಕ್ಷಣ ನೀತಿಯನ್ನು ಸಂಪೂರ್ಣ ಬದಲಾವಣೆ ಮಾಡಿ, ನಮ್ಮದೇ ಶಿಕ್ಷಣ ನೀತಿಯನ್ನು ಜಾರಿಗೆ ತರುವುದು ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ಧತೆ ಮಾಡಿಕೊಳ್ಳುವ ಮೂಲಕ ಕ್ರಾಂತಿಕಾರಕ ಹೆಜ್ಜೆಯಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತ ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ನೇತೃತ್ವದ ಸಮಿತಿ ವರದಿಯನ್ನು ಸರ್ಕಾರಕ್ಕೆ ನೀಡಿದ್ದು, ವರದಿ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದೇಶದಲ್ಲೇ ಮೊದಲಬಾರಿಗೆ ರಂಗನಾಥ್ ನೇತೃತ್ವದ ಸಮಿತಿ ವರದಿ ನೀಡಿದೆ. ಇದರ ಅನುಷ್ಠಾನ ಕುರಿತ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಲಾಗಿದೆ. ಇಡೀ ದೇಶದಲ್ಲೇ ಪ್ರಥಮವಾಗಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದೇವೆ. ಮೆಕಾಲೆ ಶಿಕ್ಷಣ ಹೋಗಲಾಡಿಸುವುದು ಪ್ರಧಾನಿಗಳ ಅಪೇಕ್ಷೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಅನುಷ್ಠಾನ ಕುರಿತು ಸುದೀರ್ಘ ಚರ್ಚೆ ಮಾಡಲಾಗಿದೆ. ಸಚಿವ ಸಂಪುಟದಲ್ಲಿ ವರದಿಯನ್ನಿಟ್ಟು ಅನುಮೋದನೆ ನೀಡುವ ಬಗ್ಗೆ ಗಮನ ನೀಡಲಾಗುವುದು ಎಂದರು.
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕಾರ್ಯಪಡೆ ಸಮಿತಿಯ ಸದಸ್ಯರಾದ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ, ವಾಸುದೇವ ಅತ್ರೆ, ಪೆÇ್ರ. ಅನುರಾಗ್ ಬೆಹರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು.