ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನ

ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ನಡೆಸಲು ಉದ್ದೇಶಿಸಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಬಿಗಿಬಂದೋಬಸ್ತ ಮಾಡಲಾಗಿದೆ. ನಾಳೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಮತ್ತು ಮೆಟ್ರೋ ನಿಗಮದ ಸೇವೆ ಎಂದಿನಂತೆ ಮುಂದುವರೆಯಲಿದೆ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ. ಆಟೋ, ಟ್ಯಾಕ್ಸಿ ಚಾಲಕರ ಸಂಘ ನಾಳಿನ ಬಂದ್‍ಗೆ ಬೆಂಬಲ ನೀಡುವುದಾಗಿ ಹೇಳಿಕೊಂಡಿದೆ. ಆಸ್ಪತ್ರೆ ಸೇವೆಗಳು, ಹಾಲು, ತರಕಾರಿ, ದಿನಪತ್ರಿಕೆ ವಿತರಣೆ ಕೆಲಸಗಳು ಎಂದಿನಂತೆ ಸಾಗಲಿವೆ. ಈ ನಡುವೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡದ ಕೆಲಸ ಕಾರ್ಯಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಆದ್ದರಿಂದ ಕನ್ನಡಪರ ಸಂಘಟನೆಗಳು ಮುಷ್ಕರ, ಬಂದ್ ವಾಪಸ್ ಪಡೆದು ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ