ಮತ್ತೊಮ್ಮೆ ಗೂಂಡಾ ವರ್ತನೆ ತೋರಿದ ಟಿಎಂಸಿ ವಿರುದ್ಧ ಬಿಜೆಪಿ ಆಕ್ರೋಶ ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ

ಕೋಲ್ಕತ್ತ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಮೇಲೆ ಕಲು ್ಲತೂರಾಟ ನಡೆದಿದ್ದ ಬೆನ್ನಲ್ಲೇ, ಶನಿವಾರ ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತನನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ಹತ್ಯೆಮಾಡಿದ್ದಾರೆಂದು ಬಿಜೆಪಿ ಆರೋಪಿಸಿದೆ. ಅಲ್ಲದೇ ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಟಿಎಂಸಿ ಮಾರ್ಪಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಉತ್ತರ 24 ಪರಗಣದಲ್ಲಿ ನಡೆಯುತ್ತಿದ್ದ ಬಿಜೆಪಿಯ ಗೃಹ ಸಂಪರ್ಕ್(ಮನೆ ಮನೆಗೆ ತೆರಳಿ ಪ್ರಚಾರ) ಅಭಿಯಾನದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತ ಸೈಕತ್ ಭವಾಲ್ ಹಾಗೂ ಅವರೊಂದಿಗಿದ್ದ 6 ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿ, ಥಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಥಳಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಸೈಕತ್‍ನನ್ನು ಕಲ್ಯಾಣಿಯಲ್ಲಿರುವ ಜವಾಹರ್ ಲಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗಿದೆ ಭಾನುವಾರ ಮೃತಪಟ್ಟಿದ್ದಾರೆ. ಉಳಿದವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೇಳಿದ್ದಾರೆ.
ಅಲ್ಲದೆ, ಘಟನೆ ಖಂಡಿಸಿ ಹಾಗೂ ಟಿಎಂಸಿಯ ಸರ್ವಾಕಾರ ಧೋರಣೆ ವಿರೋಸಿ ಪಕ್ಷವು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದಿದ್ದಾರೆ. ಇನ್ನು ಘಟನೆ ಸಂಬಂಸಿದಂತೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಬರಾಕ್‍ಪೊರ್ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ