ಮಡಿಕೇರಿ: ಕೊಡವರು ಗೋಮಾಂಸ ತಿನ್ನುತ್ತಾರೆಂದು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರು ಇಲ್ಲಿನ ಗ್ರಾಮಾಂತರ ಪೆÇಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಸಿದ್ದರಾಮಯ್ಯ ಅವರು ಕೊಡವರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಅಲ್ಲದೆ, ಕೋಮುಗಲಭೆ ಸೃಷ್ಟಿಸುವುದಕ್ಕಾಗಿ ಉದ್ದೇಶಪೂರ್ವಕವಾಗಿ ಕೊಡವರ ಬಗ್ಗೆ ಸುಳ್ಳು ಭಾಷಣ ಮಾಡುವ ಮೂಲಕ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಪ್ಪು ಬಾವುಟ ಪ್ರದರ್ಶನ:
ಕೊಡವರು ಗೋಮಾಂಸ ಸೇವಿಸುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ಕೊಡವ ಜನಾಂಗವನ್ನು ಅವಹೇಳನ ಮಾಡಿರುವ ಸಿದ್ದರಾಮಯ್ಯ ಅವರು ಕೊಡಗಿಗೆ ಆಗಮಿಸುವ ಸಂದರ್ಭ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ರವಿಕುಶಾಲಪ್ಪ ಸುದ್ದಿಗಾರರೊಂದಿಗೆ ಮಾತನಾಡುವ ಮೂಲಕ ಎಚ್ಚರಿಕೆ ನೀಡಿದರು.
ಸಾವಿರಾರು ಕೊಡವರನ್ನು ಹತ್ಯೆಗೈದ ಟಿಪ್ಪು ಜಯಂತಿ ಆಚರಣೆ ಬೇಡವೆಂದು ಕೊಡವರು ಹಾಗೂ ಕೊಡಗಿನ ಜನ ಮನವಿ ಮಾಡಿಕೊಂಡರೂ ಜಯಂತಿಯನ್ನು ಬಲವಂತವಾಗಿ ಆಚರಿಸಲಾಯಿತು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಕಾರಕ್ಕೆ ಬಂದ ನಂತರ ಕೊಟ್ಟ ಮಾತಿನಂತೆ ಟಿಪ್ಪು ಜಯಂತಿಯನ್ನು ರದ್ದು ಮಾಡಲಾಗಿದೆ. ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲಾಗುತ್ತಿದೆ.
ಸಿದ್ದರಾಮಯ್ಯಗೆ ಕೊಡವರ ಮೇಲೇಕೆ ದ್ವೇಷ:
ಅಲ್ಪಸಂಖ್ಯಾತರ ಮೇಲೆ ಅತಿ ಪ್ರೀತಿ ತೋರುವ ಸಿದ್ದರಾಮಯ್ಯ ಅವರಿಗೆ ಕೊಡವರ ಮೇಲೇಕೆ ದ್ವೇಷ. ಗೋವುಗಳನ್ನು ಪೂಜಿಸುವ ಕೊಡವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಹುಟ್ಟು ಹೋರಾಟಗಾರರಾಗಿರುವ ಕೊಡವರು ಗೋಹತ್ಯೆ ನಿಷೇಧಕ್ಕೂ ಹೋರಾಟ ನಡೆಸುತ್ತಲೇ ಬಂದಿದ್ದಾರೆ.
ಬ್ರಿಟಿಷರ ಕಾಲದಲ್ಲೂ ಗೋಹತ್ಯೆ ನಿಷೇಧ:
ಬ್ರಿಟಿಷರ ಕಾಲದಿಂದಲೇ ಕೊಡಗಿನಲ್ಲಿ ಗೋಹತ್ಯೆ ನಿಷೇಸಲಾಗಿದೆ. ಒಬ್ಬ ಹಿರಿಯ ರಾಜಕಾರಣಿಯಾಗಿ ವೀರಕೊಡಗಿನ ಚರಿತ್ರೆ ಬಗ್ಗೆ ತಿಳಿದುಕೊಳ್ಳದೆ ಬಾಯಿಗೆ ಬಂದಂತೆ ಮಾತನಾಡಿರುವುದನ್ನು ಗಮನಿಸಿದರೆ ಇದು ಸಿದ್ದರಾಮಯ್ಯ ಅವರ ರಾಜಕೀಯ ಅವಸಾನದ ಕಾಲವೆಂದು ಗೋಚರಿಸುತ್ತಿದೆ. ಅಭಿವೃದ್ಧಿ ಪರ ಚಿಂತನೆಯೊಂದಿಗೆ ಆರೋಗ್ಯಕರ ರಾಜಕಾರಣ ಮಾಡದೆ ಜಾತಿ, ಜನಾಂಗಗಳ ಭಾವನೆಗೆ ಧಕ್ಕೆ ತಂದು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು.