ಬ್ರಿಟನ್‍ನಿಂದ ಬಂದಿರುವ ವ್ಯಕ್ತಿಗಳಿಗೆ ಸಿಎಂ ಬಿಎಸ್‍ವೈ ತಾಕೀತು – ಕಿಕ್ಕರ್ ಕಣ್ತಪ್ಪಿಸಿ ಓಡಾಡದೆ ಪರೀಕ್ಷೆ ಮಾಡಿಸಿಕೊಳ್ಳಿ

::::::::: Bengaluru: BJP legislature party leaders B S Yeddyurappa, accompanied by party leaders Ananth Kumar and K Eshwarappa, gestures while addressing the media after meeting with Governor Rudabhai Vajubhai Vala to stake claim for the formation of government, in Bengaluru, on Wednesday.

ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಬಂದಿರುವವರು ಸ್ವಯಂಪ್ರೇರಿತರಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದರು.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬ್ರಿಟನ್‍ನಿಂದ ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಕಳೆದ ಎರಡು ತಿಂಗಳಿಂದೀಚೆಗೆ ಯುಕೆಯಿಂದ ಆಗಮಿಸಿರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದರು.
ಈಗಾಗಲೇ ಕೇಂದ್ರ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಿ, ಹೊರಗಿನಿಂದ ಬಂದವರನ್ನು ಚಾಚೂತಪ್ಪದೆ ಸರಿಯಾದ ರೀತಿ ಪರೀಕ್ಷೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ.
ವಿದೇಶಗಳಿಂದ ಬಂದಿರುವವರು ಕಣ್ತಪ್ಪಿಸಿಕೊಂಡು ಓಡಾಡುವುದನ್ನು ಬಿಟ್ಟು, ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು. ಈ ವೈರಾಣುವು ಬಹಳ ದೊಡ್ಡ ಪ್ರಮಾಣದಲ್ಲಿ ಹರಡುವ ಸಾಮರ್ಥ್ಯ ಇರುವುದರಿಂದ ತಡೆಗಟ್ಟಲು ಅನುಕೂಲ ಆಗಲಿದೆ. ಎರಡು ತಿಂಗಳಿನಿಂದ ಹೊರಗಿನಿಂದ ಬಂದವರು ಒಂದು ಬಾರಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ ಬೇರೆಯವರಿಗೆ ತೊಂದರೆ ಆಗುತ್ತದೆ. ಅದಕ್ಕೆ ಅವಕಾಶ ಕೊಡದೆ ಕೊರೋನಾ ತಡೆಯುವದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಾರ್ಗಸೂಚಿ ಬದಲಾವಣೆ ಇಲ್ಲ:
ಕೊರೋನಾ ಸೋಂಕು ತಡೆ ಹಿನ್ನೆಲೆಯಲ್ಲಿ ಹಾಲಿ ಅನುಸರಿಸುತ್ತಿರುವ ಮಾರ್ಗಸೂಚಿ ಮುಂದುವರಿಯಲಿದೆ. ಸದ್ಯ ಮಾರ್ಗಸೂಚಿ ಬದಲಾವಣೆ ಇಲ್ಲ. ಕೇಂದ್ರದಿಂದ ಸೂಚನೆ ಬಂದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ವಿವರಿಸಿದರು.

500 Internal Server Error

Internal Server Error

The server encountered an internal error or misconfiguration and was unable to complete your request.

Please contact the server administrator, webmaster@push.vartamitra.com and inform them of the time the error occurred, and anything you might have done that may have caused the error.

More information about this error may be available in the server error log.

Additionally, a 500 Internal Server Error error was encountered while trying to use an ErrorDocument to handle the request.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ