ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾರತೀಯ ಜನತಾ ಪಕ್ಷವು ದಿನೇ ದಿನೆ ತನ್ನ ಸಾಧನೆಗಳನ್ನು ಉತ್ತಮಗೊಳಿಸುತ್ತಾ ಮುನ್ನಡೆಯುತ್ತಿದ್ದು, 3800 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದು ದೊಡ್ಡ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಣ್ಣಿಸಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಒಟ್ಟು 5,728 ಗ್ರಾಪಂಗಳ ಪೈಕಿ 3,800 ಪಂಚಾಯಿತಿಗಳಲ್ಲಿ ಶೇ.60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಸಿದ್ದಾರೆ. ಇದು ಕಾರ್ಯಕರ್ತರ ಶ್ರಮದಿಂದ ಸಿಕ್ಕಿರುವ ಗೆಲುವು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸೂರ್ತಿದಾಯಕ ನಾಯಕತ್ವದ ಕಾರಣದಿಂದ ಎಲ್ಲ ಚುನಾವಣೆಗಳಲ್ಲಿ ಉತ್ತಮ ಸಾಧನೆ ಆಗಿದೆ. 2019ರ ಉಪ ಚುನಾವಣೆ ವೇಳೆ 15ರಲ್ಲಿ 12 ಕ್ಷೇತ್ರಗಳು ಬಿಜೆಪಿ ಗೆದ್ದಿದೆ. ರಾಜರಾಜೇಶ್ವರಿನಗರ, ಶಿರಾದಂತಹ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಸಿದೆ. ಈಗ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಬೆಂಬಿಲಿಸಿದವರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದ ಮೇಲೆ ದೇಶದ ಜನರಿಗೆ ನಂಬಿಕೆ ಇದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ. ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚು ಮತ ಚಲಾಯಿಸುವುದು. ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದರಿಂದ ಇದು ರೈತಪರ, ಜನಪರ ಸರ್ಕಾರ ಎಂದು ಸಾಬೀತಾಗಿದೆ ಎಂದು ಸಂತಸ ಹಂಚಿಕೊಂಡರು.
ರೈತರ ಬೇಡಿಕೆ ಈಡೇರಿಕೆ:
ಕೇಂದ್ರ ಸರ್ಕಾರವು 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಲುವಾಗಿ ಹಲವು ಸುಧಾರಣೆಗಳನ್ನು ತಂದಿದ್ದಾರೆ. ರೈತರ ಶ್ರೇಯೋಭಿವೃದ್ಧಿಗಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆ ತಂದಿದ್ದು, ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾತ್ರವಲ್ಲದೆ, ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬ ರೈತರ ಬಹುವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆ ಪದ್ಧತಿಯನ್ನು ಮುಂದುವರಿಸಲಾಗಿದೆ. ಮುಂದುವರಿದ ರಾಷ್ಟ್ರಗಳೊಂದಿಗೆ ಸ್ರ್ಪಸಿ ಆರ್ಥಿಕಾಭಿವೃದ್ಧಿಯಲ್ಲಿ ಮುನ್ನಡೆ ಸಾಸಲಾಗುತ್ತಿದೆ. ಪಿಎಂ ಕಿಸಾನ್ ಸಮ್ಮಾನ್, ಮಾಸಿಕ ಪಿಂಚಣಿ, ಮಾಸಾಶನಗಳು, ಉಜ್ವಲ ಹೀಗೆ ಅನೇಕ ಜನರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ಸಾಧನೆಯನ್ನು ವಿರೋಸುವುದೇ ಸಾಧನೆ ಅಲ್ಲ:
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳ ಜಾರಿಗೆ ಕರ್ನಾಟಕ ಸರ್ಕಾರ ಕೂಡ ಶ್ರಮಿಸುತ್ತಿದೆ. ಇಷ್ಟೆಲ್ಲಾ ಸಾಧನೆಗಳಾಗುತ್ತಿದ್ದರೂ ವಿರೋಧ ಪಕ್ಷದ ಕೆಲ ನಾಯಕರು ಟೀಕಿಸುವ ಮೂಲಕ ಪ್ರಗತಿಯ ವಿರೋಗಳಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ವೈಯಕ್ತಿಕವಾಗಿ ವಿರೋಸುತ್ತಿರಬಹುದೇ ಹೊರತು, ಅವರ ದೂರದೃಷ್ಟಿಯುತ ನೀತಿಗಳನ್ನು ವಿರೋಸಲು ಸಾಧ್ಯವೇ ಇಲ್ಲ ಎಂದು ಯಡಿಯೂರಪ್ಪ ವಿವರಿಸಿದರು.