ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಂಗ ಸಂಸ್ಥೆಯಾದ ಮೈಸೂರಿನ ಅಬ್ದುಲï ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಹೊಸದಾಗಿ ಆಯ್ಕೆಯಾಗಿರುವ ಗ್ರಾಪಂ ಸದಸ್ಯರಿಗೆ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜ.19 ರಿಂದ ಮಾರ್ಚ್ 26ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5762 ಗ್ರಾಪಂಗಳ 92131 ಸದಸ್ಯರಿಗೆ ತರಬೇತಿ ನೀಡಲಾಗುತ್ತದೆ. 285 ಕೇಂದ್ರಗಳಲ್ಲಿ 40 ಸದಸ್ಯರಿಗೆ ಒಂದು ಬ್ಯಾಚ್‍ನಂತೆ 900 ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಪ್ರತಿಯೊಂದು ಬ್ಯಾಚ್‍ಗೂ 5 ದಿನಗಳ ತರಬೇತಿ ನೀಡಲಾಗುತ್ತದೆ ಎಂದರು.
ಈ ಅವಯಲ್ಲಿ ವಿಷಯಾಧಾರಿತ ಅವೇಶನಗಳ ಮಾಹಿತಿ, ಕೌಶಲಾಧಾರಿತ ವಿಚಾರಗಳನ್ನು ತಿಳಿಸಲಾಗುತ್ತದೆ. ಪ್ರತೀ ಅವೇಶನದಲ್ಲಿ ವೀಡಿಯೋ ಮೂಲಕ ತಜ್ಞರಿಂದ ಮಾಹಿತಿ ಕೊಡಿಸಲಾಗುತ್ತದೆ. ಗುಂಪು ಚರ್ಚೆ, ಚಟುವಟಿಕೆಗಳನ್ನು ನಿರ್ವಹಿಸಲಾಗುತ್ತದೆ. ಪ್ರಶ್ನೋತ್ತರ ಕಾರ್ಯಕ್ರಮ ಕೂಡ ಇರುತ್ತದೆ. ತರಬೇತಿ ಅವಯಲ್ಲಿ ಟಿಎ, ಡಿಎ ನೀಡಲಾಗುತ್ತದೆ ಎಂದರು.
ಗ್ರಾಪಂಗಳ ರಚನೆ ಮತ್ತು ಸ್ವರೂಪ, ಪ್ರಕಾರ್ಯಗಳು, ಸದಸ್ಯರುಗಳ ಕರ್ತವ್ಯ ಮತ್ತು ಹೊಣೆಗಾರಿಕೆ, ವಿವಿಧ ಸಭೆಗಳು, ವಾರ್ಡ್ ಮತ್ತು ಗ್ರಾಮ ಸಭೆಗಳ ನಿರ್ವಹಣೆ, ಹಣಕಾಸು ಸಂಪನ್ಮೂಲ ಲಭ್ಯತೆ, ದೂರದೃಷ್ಟಿಯ ಯೋಜನೆಗಳ ಬಗ್ಗೆ ತಿಳಿಸಲಾಗುತ್ತದೆ ಎಂದರು.
ಇನ್ನು ಒಂದು ತಿಂಗಳೊಳಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಅವರಿಗೂ ಕೂಡ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಬಿ.ಕೆ.ಶ್ರೀನಾಥ್, ಶಿವರಾಜ್, ಧರ್ಮಪ್ರಸಾದ್, ಪ್ರಭಾಕರ್, ಕೆ.ವಿ. ಅಣ್ಣಪ್ಪ ಮತ್ತಿತರರು ಇದ್ದರು.