![corona-medicine-875 (1)](http://kannada.vartamitra.com/wp-content/uploads/2020/04/corona-medicine-875-1-572x381.jpg)
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ರಾಜ್ಯಗಳಲ್ಲೂ ಕೊರೋನಾ ಲಸಿಕೆ ತಾಲೀಮು ಇಂದಿನಿಂದ ಆರಂಭವಾಗಲಿದ್ದು, ರಾಜ್ಯದಲ್ಲಿ ಐದು ಕೇಂದ್ರಗಳನ್ನು ಗುರುತಿಸಲಾಗಿದೆ.
ಬೆಂಗಳೂರು, ಕಲಬುರಗಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಲಸಿಕೆ ತಾಲೀಮು ನಡೆಸಲಾಗುತ್ತಿದ್ದು, ನಿಗದಿಪಡಿಸಿದ ತಾಲ್ಲೂಕು, ಜಿಲ್ಲಾ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿಯೋಜಿತ ಆರೋಗ್ಯ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ.
ತಾಲೀಮುಗೆ ಮೂರು ಪ್ರತ್ಯೇಕ ಕೊಠಡಿಗಳನ್ನು ನಿಯೋಜಿಸಲಾಗುತ್ತಿದ್ದು, ಲಸಿಕೆ ಸರಬರಾಜು, ಸಂಗ್ರಹ, ಕೋಲ್ಡ್ ಚೈನ್ ಮ್ಯಾನೇಜ್ಮೆಂಟ್ ಎಲ್ಲದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇಶಾದ್ಯಂತ 96,000 ಸಾವಿರ ಜನರಿಗೆ ಲಸಿಕೆ ಕೊಡುವ ತರಬೇತಿ ನೀಡಲಾಗಿದ್ದು, ಈಗಾಗಲೇ 719 ಗಳಲ್ಲಿ ತರಬೇತಿ ನೀಡಲಾಗಿದೆ.
ಜನವರಿ ತಿಂಗಳಲ್ಲಿ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಇದಕ್ಕೆ ಪೂರ್ವಭಾವಿಯಾಗಿ ಜ.2ರಿಂದ ದೇಶಾದ್ಯಂತ ಕೊರೋನಾ ಲಸಿಕೆ ತಾಲೀಮು ನಡೆಸಲು ಮುಂದಾಗಿದೆ. ಲಸಿಕೆ ತಾಲೀಮುನಲ್ಲಿ ಭಾಗವಹಿಸುವವರಿಗೆ ಪರೀಕ್ಷಾ ಕೊರೋನಾ ವೈರಸ್ ಲಸಿಕೆ ನೀಡಲಾಗುತ್ತದೆ. ಅಲ್ಲದೇ ಲಸಿಕೆ ವಿತರಣೆ ಹಾಗೂ ಹಂಚಿಕೆಯ ಪ್ರಕ್ರಿಯೆಯ ತಾಲೀಮು ನಡೆಸಲಾಗುತ್ತದೆ.
ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಎರಡು ಕೇಂದ್ರಗಳಲ್ಲಿ ಮಾತ್ರ ಲಸಿಕೆ ತಾಲೀಮು ನಡೆಸಲಾಗುತ್ತಿದ್ದು, ಕರ್ನಾಟಕದಲ್ಲಿ 5 ಕೇಂದ್ರಗಳಲ್ಲಿ ಲಸಿಕೆ ಪ್ರಯೋಗ ನಡೆಯಲಿದೆ.