ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಅರುಣ್ ಸಿಂಗ್ ಶೀಘ್ರ ಸಂಪುಟ ವಿಸ್ತರಣೆ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವಾಗಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭರವಸೆ ನೀಡಿದರು.
ಇಲ್ಲಿನ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ವಿಶೇಷ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಶೀಘ್ರದಲ್ಲೇ ರಾಜ್ಯದ ಸಂಪುಟ ವಿಸ್ತರಣೆ ಮಾಡಲಿರೆ .
ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಲಾಗುತ್ತಿರುವ ಮುಖ್ಯಮಂತ್ರಿ ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ, ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇದರ ಅಗತ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಚೌಕಟ್ಟಿನಲ್ಲಿ ಚರ್ಚೆ:
ಪಕ್ಷದಲ್ಲಿ ಎಕಾರ್ಯಕರ್ತರನ್ನು ಗೌರವದಿಂದ ಕಾಣಲಾಗುತ್ತದೆ. ಅದನ್ನು ಯಾರೂ ಕೂಡ ದುರುಪಯೋಗ ಮಾಡಿಕೊಳ್ಳಬಾರದು. ಏನೇ ಸಮಸ್ಯೆ ಇದ್ದರೆ ಮುಖಾಮುಖಿ ಮಾತನಾಡಬೇಕು. ಪಕ್ಷದ ಚೌಕಟ್ಟನ್ನು ಹೊರತುಪಡಿಸಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಯಾರ ಜೊತೆಗೂ ಹೊಂದಾಣಿಕೆ ಇಲ್ಲ:
ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಯಶಸ್ಸು ಸಾಸಿದೆ. ಮುಂದಿನ ಚುನಾವಣೆಯಲ್ಲೂ ಯಶಸ್ಸು ಸಾಸಬೇಕು. ಹಾಗಾಗಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ