ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಗುರಿ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ

ಶಿವಮೊಗ್ಗ: ಕೃಷಿಕರಿಗೆ ತೊಂದರೆಯಾಗುವ ಕಸ್ತೂರಿರಂಗನ್ ವರದಿ ಜಾರಿ ಬರಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದರು.
ಶೀಘ್ರದಲ್ಲೇ ರಾಜ್ಯ ಪ್ರವಾಸ:
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 140 ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇದೆ. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಗರಿಷ್ಠ ಶ್ರಮ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮೋದಿ ಈಗ ವಿಶ್ವದ ಅಗ್ರಗಣ್ಯ ನಾಯಕ:
ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಅಗ್ರಗಣ್ಯ ನಾಯಕ ಎಂದು ಜಗತ್ತು ಒಪ್ಪಿಕೊಂಡಿದೆ. ದೇಶವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಶ್ರಮ ವಹಿಸಿರುವ ಅಗ್ರಗಣ್ಯ ನಾಯಕ ಮೋದಿ ಅವರು ಮತ್ತೊಂದು ಬಾರಿ ಪ್ರಧಾನಿಯಾಗಿ ದೇಶವನ್ನು ಅಗ್ರಗಣ್ಯ ರಾಷ್ಟವನ್ನಾಗಿ ಮಾಡಲಿ, ನಾನು ಹೋಗುವ ಎಲ್ಲಾ ದೇವಸ್ಥಾನಗಳಲ್ಲೂ ನರೇಂದ್ರ ಮೋದಿಯವರಿಗೆ ದೇವರು ಆರೋಗ್ಯ ಆಯುಷ್ಯ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ