ಹೊಸದಿಲ್ಲಿ: ರಾಷ್ಟ್ರದ ಇಂಧನ ಕ್ಷೇತ್ರದ ಮೈಲಿಗಲ್ಲಾಗಲಿರುವ ಕರ್ನಾಟದ ಮಂಗಳೂರು -ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಜ.5ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ.
ವೀಡಿಯೋ ಕಾನರೆನ್ಸ್ ಮೂಲಕ ಪ್ರಧಾನಿ ಕೊಳವೆ ಮಾರ್ಗಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರ ಜತೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಇರಲಿದ್ದಾರೆ.
ಜಿ.ಎ.ಐ.ಎಲï. (ಇಂಡಿಯಾ) ನಿರ್ಮಿಸಿರುವ ಈ ಕೊಳವೆ ಮಾರ್ಗ
450 ಕಿ.ಮೀ. ಉದ್ದದಾಗಿದ್ದು, ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮಥ್ರ್ಯ ಹೊಂದಿದೆ.
ಕೇರಳದ ಕೊಚ್ಚಿಯ ಧ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ) ಮರು ಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲ್ಲಪುರಂ, ಕಲ್ಲಿಕೋಟೆ, ಕಣ್ಣೂರು ಮತ್ತು ಕಾಸರಗೋಡು ಜಿಯ ಮೂಲಕ ಕರ್ನಾಟಕದ ದಕ್ಷಿಣ ಕನ್ನಡ ಜಿ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ. ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.