ದಾವಣಗೆರೆ: ಜೈವಿಕ ಸಂಪನ್ಮೂಲ ರಕ್ಷಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ನಿಷೇಸಿರುವ ಕೀಟನಾಶಕಗಳ ಮಾರಾಟಕ್ಕೆ ಕಡಿವಾಣ ಹಾಕಲಾಗುವುದು ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ತಿಳಿಸಿದರು.
ಇಲ್ಲಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಸಮಸ್ತ ಜೀವಸಂಕುಲ ರಕ್ಷಿಸುವುದು, ಎಲ್ಲ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಮತ್ತು ಅವುಗಳ ಸಂಯಮಶೀಲ ಬಳಕೆ ವಿಧಾನಗಳನ್ನು ಜಾರಿಗೆ ತರುವಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಜವಾಬ್ದಾರಿ ಮಹತ್ವದ್ದಾಗಿದೆ. ಪರಿಸರ ಹಾಗೂ ಜೀವ ಸಂಕುಲಕ್ಕೆ ಮಾರಕವಾಗಿರುವ ಹಲವು ಬಗೆಯ ಕೀಟನಾಶಕಗಳ ಬಳಕೆ ಮತ್ತು ಮಾರಾಟವನ್ನು ಸರ್ಕಾರ ನಿಷೇಸಿದೆ. ಆದರೆ ಬಹಳಷ್ಟು ಗೊಬ್ಬರದ ಅಂಗಡಿಗಳಲ್ಲಿ ಇವು ಇನ್ನೂ ಮಾರಾಟವಾಗುತ್ತಿರುವ ಸಾಧ್ಯತೆಗಳಿದ್ದು, ಅಂತಹ ನಿಷೇತ ಕೀಟನಾಶಕ ಮಾರಾಟ ತಡೆಗೆ ಕೃಷಿ ಇಲಾಖೆ ಅಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ವಿನಾಶದ ಅಂಚಿನಲ್ಲಿರುವ ಅಪರೂಪದ ಔಷೀಯ ಸಸ್ಯಗಳನ್ನು ಗುರುತಿಸಿ, ಅವುಗಳ ರಕ್ಷಣೆಗೂ ಕ್ರಮ ಕೈಗೊಳ್ಳಲಾಗುವುದು. ಈ ದಿಸೆಯಲ್ಲಿ ಜಿಲ್ಲಾವಾರು ಮಾಹಿತಿ ಪಡೆದು, ವರದಿ ತಯಾರಿಸಲು ಯೋಜಿಸಲಾಗಿದೆ. ಮಲೆನಾಡು ಪ್ರದೇಶದಲ್ಲಿ ಅಕೇಶಿಯಾದಂತಹ ಏಕಜಾತಿ ನೆಡುತೋಪು ಬೆಳೆಸುವುದರಿಂದ ಜೀವ ವೈವಿಧ್ಯ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಆದ್ದರಿಂದ ಸ್ಥಾನೀಯ ಜಾತಿ ಗಿಡಗಳನ್ನು ಬೆಳೆಸುವಂತಾಗಲು ಜೀವ ವೈವಿಧ್ಯ ಮಂಡಳಿ ಪ್ರಯತ್ನ ನಡೆಸಲಿದೆ. ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿಕೊಂಡು, ಸುಸ್ಥಿರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ವಿವಿಧ ನಗರ, ಪಟ್ಟಣಗಳಲ್ಲಿ ಹಲವಾರು ಪಾರ್ಕ್ಗಳಿವೆ. ನಿರ್ಲಕ್ಷ ್ಯಕ್ಕೊಳಗಾಗಿರುವ ಅಂತಹ ಎಲ್ಲ ಪಾರ್ಕ್ಗಳನ್ನು ಪುನಃಶ್ಚೇತನಗೊಳಿಸುವುದು ಅಗತ್ಯವಾಗಿದೆ. ಪಾರ್ಕ್ಗಳಲ್ಲಿ ಹೆಚ್ಚಿನ ಗಿಡಮರ ಬೆಳೆಸಿ, ರಕ್ಷಣೆ ಹಾಗೂ ಅಭಿವೃದ್ಧಿಗೊಳಿಸುವಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ. ನಗರ, ಪಟ್ಟಣಗಳಲ್ಲಿ ತ್ಯಾಜ್ಯ ವಿಲೇವಾರಿ ಸವಾಲಿನ ವಿಷಯವಾಗಿದ್ದು, ಅಡುಗೆ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆಗೆ ಅವಕಾಶವಿದೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಕಾರಿ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮತ್ತಿತರರಿದ್ದರು.