ಕಲಬುರಗಿ: ಪರಿಷತ್ ಗದ್ದಲ ವಿಚಾರಕ್ಕೆ ಸಂಬಂಸಿದಂತೆ ಸಭಾಪತಿ ಆದೇಶಿಸಿರುವ ತನಿಖೆ ಅಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಣ್ಣ ನೀರಾವರಿ ಹಾಗೂ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಅವರು ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಪರಿಷತ್ ಸದಸ್ಯರ ನಡವಳಿಕೆಗಳ ಬಗ್ಗೆ ತನಿಖೆಗೆ ಸಭಾಪತಿ ಆದೇಶ ನೀಡಿಲ್ಲ. ಈ ರೀತಿಯ ಗದ್ದಲ ಗಲಾಟೆ ಯಾರೂ ನಿರೀಕ್ಷಿಸಿರಲಿಲ್ಲ ಎಂದರು.
ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ 14 ದಿನ ಕಳೆದಿತ್ತು, ಹೀಗಾಗಿ ಅವರಾಗಿಯೇ ಕುರ್ಚಿ ಬಿಟ್ಟು ಕೊಡುತ್ತಾರೆ ಎನ್ನುವ ವಿಶ್ವಾಸ ಇತ್ತು. ಆದರೆ ಬೆಲ್ ನಂತರವೂ ಸಭಾಪತಿ ಬಾರದಿರುವ ಕಾರಣ ಉಪಸಭಾಪತಿಯವರನ್ನು ಕೂರಿಸಲಾಯಿತು. ಇದಾದನಂತರ ಅನಿರೀಕ್ಷಿತ ರೀತಿಯಲ್ಲಿ ಗಲಾಟೆ ಗದ್ದಲ ನಡೆಯಿತು . ಈ ಕುರಿತು ನಡೆಯುತ್ತಿರುವ ತನಿಖೆ ಕೇವಲ ಅಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.
ವಿಲೀನದ ಹೆಸರಲ್ಲಿ ಜೆಡಿಎಸ್ ಇಬ್ಬಾಗ ಮಾಡಲು ಬಿಜೆಪಿ ತಂತ್ರ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರೇ ವಿಧಾನ ಪರುಷತ್ತಿನಲ್ಲಿ ನಮ್ಮನ್ನುಬೆಂಬಲಿಸಿದ್ದಾರೆ ಎಂದರು.
ಕಳೆದ ಒಂದು ವರ್ಷದಿಂದ ರಾಜ್ಯ ವಿವಿಧ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆ, ಯಾವುದೇ ಶಾಸಕರಿಗೂ ಮೊದಲಿನಂತೆ ಬಜೆಟ್ ನೀಡಲು ಸಾಧ್ಯವಾಗಿಲ್ಲ ಎಂದರು.ಎಲ್ಲಾ ಕೆಲಸವು ಸರಿಯಾಗಿ ಆಗಿದೆ ಎಂದು ಆತ್ಮವಿಶ್ವಾಸದಿಂದ ಯಾರು ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.