![coronavirus](http://kannada.vartamitra.com/wp-content/uploads/2020/05/coronavirus-678x381.gif)
ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಕೆಯ ಪ್ರಮಾಣ ಶೇಕಡ 96.49ಕ್ಕೆ ಏರಿಕೆಯಾಗಿದೆ. ಕಳೆದ 24 ತಾಸಿನಲ್ಲಿ 18 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 1 ಕೋಟಿ ಒಂದು ಲಕ್ಷಕ್ಕೆ ಏರಿದೆ. ಭಾರತದಲ್ಲಿನ ಚೇತರಿಕೆ ಪ್ರಮಾಣ ವಿಶ್ವದಲ್ಲೇ ಅತ್ಯಧಿಕವಾಗಿದೆ. ಒಟ್ಟು ದೃಢಪಟ್ಟ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇಕಡ 2.07ರಷ್ಟಿದ್ದು, ಸದ್ಯ ಈ ಪ್ರಕರಣಗಳ ಸಂಖ್ಯೆ 2 ಲಕ್ಷದ 16 ಸಾವಿರದಷ್ಟಿದೆ. ಕಳೆದ 24 ತಾಸಿನಲ್ಲಿ 12 ಸಾವಿರದ 584 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಕೋಟಿ 4 ಲಕ್ಷ ದಾಟಿದೆ. ಭಾರತದಲ್ಲಿ ಸೋಂಕಿನಿಂದ ಸಾವಿನ ಪ್ರಮಾಣ ಶೇಕಡ 1.44ರಷ್ಟಿದ್ದು, ಇದು ಜಾಗತಿಕವಾಗಿ ಕನಿಷ್ಠ ಪ್ರಮಾಣವಾಗಿದೆ. ಕಳೆದ 24 ತಾಸಿನಲ್ಲಿ 167 ಮಂದಿ ಸೋಂಕಿನಿಂದ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ ಒಂದು ಲಕ್ಷ 51 ಸಾವಿರದ 327ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ತಾಸಿನಲ್ಲಿ 8 ಲಕ್ಷದ 97 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಈವರೆಗೆ ಪರೀಕ್ಷಿಸಲಾದ ಒಟ್ಟು ಕೋವಿಡ್ ಮಾದರಿಗಳ ಸಂಖ್ಯೆ 18 ಕೋಟಿ 26 ಲಕ್ಷಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.