ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುವದಿನದ ಅಂಗವಾಗಿ ಎರಡನೇ ರಾಷ್ಟ್ರೀಯ ಯುವಸಂಸತ್ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುವದಿನದ ಅಂಗವಾಗಿ ಎರಡನೇ ರಾಷ್ಟ್ರೀಯ ಯುವಸಂಸತ್ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ವಿವೇಕಾನಂದರ ಆಶಯದಂತೆ ಜನರ ಸೇವೆಯಿಂದ ಜಗತ್ತಿನ ಸೇವೆ ಮಾಡಬೇಕು. ವ್ಯಕ್ತಿಯಿಂದ ಸಂಸ್ಥೆ ನಿರ್ಮಾಣ, ಸಂಸ್ಥೆಯಿಂದ ಅನೇಕ ವ್ಯಕ್ತಿಗಳನ್ನು ನಿರ್ಮಾಣ ಮಾಡಬೇಕು ಎಂಬ ಅವರ ಚಿಂತನೆಗಳು ಯುವ ಸಮೂಹಕ್ಕೆ ಪ್ರೇರಣೆಯಾಗಬೇಕು. ರಾಷ್ಟ್ರೀಯ ಯುವ ಸಂಸತ್ ಸಂವಿಧಾನವನ್ನು ರಚಿಸಿದ ಸಂಸತ್ ಭವನದ ಕೇಂದ್ರ ಸಭಾಂಗಣದಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು. ಕೇಂದ್ರದ ನೂತನ ಶಿಕ್ಷಣ ನೀತಿಯಲ್ಲೂ ವಿವೇಕಾನಂದರ ಚಿಂತನೆಗಳಿವೆ. ಹಲವಾರು ವ್ಯಕ್ತಿಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಸ ಶಿಕ್ಷಣ ನೀತಿ ಒಳಗೊಂಡಿದೆ. ಕೇಂದ್ರ ಸರ್ಕಾರ ಯುವಜನತೆಗೆ ಉತ್ತಮ ಅವಕಾಶಗಳನ್ನು ಒದಗಿಸುವ ಪರಿಸರವನ್ನು ನಿರ್ಮಿಸುತ್ತಿದೆ ಎಂದು ನರೇಂದ್ರ ಮೋದಿ ಹೇಳಿದರು. ದೇಶಕ್ಕೆ ವಂಶಾಡಳಿತ ರಾಜಕಾರಣ ಸವಾಲಾಗಿದ್ದು, ಇದನ್ನು ಬೇರು ಸಹಿತ ನಿರ್ಮೂಲನೆ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಾತನಾಡಿ, ಇಡೀ ದೇಶದಲ್ಲಿ ರಾಜ್ಯ ಸರ್ಕಾರಗಳ ಮೂಲಕ ‘ನಿಮ್ಮ ಸಂವಿಧಾನದ ಬಗ್ಗೆ ತಿಳಿಯಿರಿ’ ಎಂಬ ಪ್ರಚಾರಾಂದೋಲನವನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ಮೂವರು ರಾಷ್ಟ್ರಪದಕ ವಿಜೇತರು ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಂಡರು. ಕೇಂದ್ರ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕಿರಣ್ ರಿಜಿಜು ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ