ಬೆಂಗಳೂರು: ಏಳು ಜನ್ಮ ಎತ್ತಿ ಬಂದರೂ ಕಾಂಗ್ರೆಸ್ಮುಕ್ತ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡಿಬಿಡುತ್ತೇವೆ ಎಂದು ಬಿಜೆಪಿಯವರು ಓಡಾಡುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಇತಿಹಾಸವುಳ್ಳ ಪಕ್ಷವನ್ನು ಮುಕ್ತಗೊಳಿಸುವುದು ಅಷ್ಟು ಸುಲಭವಿಲ್ಲ. ಅದಕ್ಕೆ ಜನರು ಅವಕಾಶ ನೀಡುವುದಿಲ್ಲ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪನವರೇ ಈಗಷ್ಟೇ ಸಂಪುಟ ವಿಸ್ತರಣೆ ಮಾಡಿದ್ದೀರಿ. ನೀವು ಯಾರನ್ನ ಬೇಕಾದರೂ ಸಂಪುಟಕ್ಕೆ ತೆಗೆದುಕೊಳ್ಳಿ. ನಮ್ಮದು ಯಾವ ಅಭ್ಯಂತರವೂ ಇಲ್ಲ. ಆದರೆ, ನಿಮ್ಮವರೇ ಬ್ಲಾಕ್ ಮೇಲರ್ಸ್ ಸಂಪುಟ ಎಂದಿದ್ದಾರೆ . ನಿಮ್ಮ ಸಿ.ಡಿ. ಬಗ್ಗೆಯೂ ಮಾತನಾಡಿದ್ದಾರೆ. ಬ್ಲಾಕ್ ಮೇಲರ್ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ರೆ ಎಂದು ನಿಮ್ಮದೇ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಹೇಳಿಕೆ ಕೊಡುತ್ತಿದ್ದಾರೆ. ನೀವು ಲಂಚ ಪಡೆದಿದ್ದೀರಿ ಎಂಬ ಮಾತುಗಳು ಕೇಳಿಬಂದಿವೆ. ಇದ್ಯಾವುದೂ ನನ್ನ ಹೇಳಿಕೆಯಲ್ಲ. ಇದೆಲ್ಲವೂ ಬಿಜೆಪಿ ಧ್ವನಿ ಎಂದು ಟೀಕಿಸಿದರು.
ನ್ಯಾಯಾಂಗ ತನಿಖೆಗೆ ಆಗ್ರಹ:
ಸಿ.ಡಿ. ಒಳಗೆ ಏನಿದೆ ಎಂಬುದು ನಿಮ್ಮವರಿಗೇ ಗೊತ್ತಿದೆ. ಇದರ ಜತೆ ಲಂಚದ ಬಗ್ಗೆಯೂ ಮಾತನಾಡಿದ್ದಾರೆ ರೆ. ಎಷ್ಟು ಮೊತ್ತದ ಲಂಚ ಕೊಟ್ಟಿದ್ದಾರೆ ರೆ? ಮತ್ತೊಬ್ಬ ಸಚಿವರು ಅದೆಷ್ಟೋ ಖರ್ಚು ಮಾಡಿದ್ದಾರೆ ರೆ ಎಂದು ಹೇಳಿಕೆ ಕೊಟ್ಟಿದ್ದಾರೆ ರೆ. ಇದೆಲ್ಲದಕ್ಕೂ ಉತ್ತರ ಸಿಗಬೇಕಲ್ಲವೇ?
ಬ್ಲಾಕ್ ಮೇಲ, ಲಂಚ ಆರೋಪದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಈ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ಐಟಿ, ಇ.ಡಿ.ಯವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕೆಂಬುದು ಕಾಂಗ್ರೆಸ್ನ ಒತ್ತಾಯವೂ ಆಗಿದೆ ಎಂದು ಶಿವಕುಮಾರ್ ತಿಳಿಸಿದರು.