ಲಂಡನ್: ಭಾರತ ಸದಸ್ಯ ರಾಷ್ಟ್ರ ಅಲ್ಲದಿದ್ದರೂ ಕೋರ್ನ್ವಾಲ್ನಲ್ಲಿ ಜೂನ್ನಲ್ಲಿ ನಡೆಯಲಿರುವ ಜಿ-7ಶೃಂಗಸಭೆಯಲ್ಲಿ ಭಾಗವಹಿಸಲು ಬ್ರಿಟನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದೆ.
ವಿಶ್ವದ ಆರ್ಥಿಕ ಬಲಾಢ್ಯ ಪ್ರಜಾಪ್ರಭುತ್ವ ದೇಶಗಳಾದ ಬ್ರಿಟನ್, ಜರ್ಮನಿ, ಕೆನಡಾ, ಫ್ರಾನ್ಸ್, ಜಪಾನ್, ಇಟಲಿ ಮತ್ತು ಅಮೆರಿಕ ಒಳಗೊಂಡ ಒಕ್ಕೂಟವಾಗಿದೆ. ಈ ಬಾರಿಯ ಜಿ-7 ಶೃಂಗಸಭೆಯಲ್ಲಿ ಕೊರೊನಾ ಸಾಂಕ್ರಾಮಿಕ ಪಿಡುಗು, ಹವಾಮಾನ ಬದಲಾವಣೆ, ತಂತ್ರಜ್ಞಾನ ಬದಲಾವಣೆಗಳು, ವೈಜ್ಞಾನಿಕ ಸಂಶೋಧನೆಗಳು ಮತ್ತು ಮುಕ್ತ ವ್ಯಾಪಾರ ಕುರಿತು ಚರ್ಚೆ ನಡೆಯಲಿದೆ.
ಭಾರತ ಹೊರತಾಗಿ ಆಸ್ಟ್ರೇಲಿಯಾ, ದಕ್ಷಿಣ ಕೋರಿಯಾಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ.
ಆದಾಗ್ಯೂ, ಜಿ-7ಶೃಂಗಸಭೆಗೂ ಮುನ್ನ ಪ್ರಧಾನಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ. ಬ್ರಿಟನ್ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾದ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕಾಗಿದ್ದ ಬೋರಿಸ್ ಭಾರತ ಭೇಟಿಯನ್ನು ರದ್ದುಗೊಳಿಸಿದ್ದರು.