ಲಾಕ್‍ಡೌನ್ ವೇಳೆ 97 ಸಾವಿರ ಬಡವರಿಗೆ ಹೆಚ್ಚುವರಿ ಸಿಲಿಂಡರ್ ಅನಿಲಭಾಗ್ಯದಲ್ಲಿ 97 ಸಾವಿರ ಫಲಾನುಭವಿಗಳು

ಬೆಂಗಳೂರು : ಕೇಂದ್ರ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿಯಲ್ಲಿ 97,000 ಫಲಾನುಭವಿಗಳಿಗೆ ಅನಿಲ ಸಂಪರ್ಕ ನೀಡಲಾಗಿದೆ. ಲಾಕ್‍ಡೌನ್ ಅವಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲು 3 ಸಿಲಿಂಡರ್‍ಗಳನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಸೋಮವಾರ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹಾಗೂ ಇತರ ಅನಿಲ ಪೂರೈಕೆ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸಂರಕ್ಷಣ ಕ್ಷಮತಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ತೈಲವನ್ನು ಹೇಗೆ ಉಪಯೋಗಿಸಬೇಕು ಎಂಬುದರ ಬಗ್ಗೆ ಅರಿವು ಮೂಡಿಸಲು ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಚಾಲಕರಿಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ರಾಜ್ಯದ 9 ಡಿಪೊಗಳು ಅತ್ಯುತ್ತಮ ಇಂಧನ ದಕ್ಷತೆ ತೋರಿದೆ. ಅವುಗಳಿಗೆ ತಲಾ 50 ಸಾವಿರ ರೂ. ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ರಾಜ್ಯ ಮುಖ್ಯಸ್ಥ ಡಿ.ಎಲ್.ಪ್ರಮೋದ್ ಮಾತನಾಡಿ, ಪೆಟ್ರೋಲಿಯಂ ಸೇರಿದಂತೆ ಶೇ.80ರಷ್ಟು ತೈಲವನ್ನ ಆಮದು ಮಾಡಿಕೊಳ್ಳಲಾಗುತ್ತದೆ. ನೈಸರ್ಗಿಕ ಅನಿಲಗಳ ಬಳಕೆ ಹೆಚ್ಚಾಗಬೇಕು. ಇದರಿಂದ ವಿದೇಶಗಳಿಂದ ಆಮದು ಮಾಡಿಕೊಳ್ಳುವುದು ಕಡಿಮೆಯಾಗಲಿದೆ. ಇಂತಹ ಸಂಪತ್ತನ್ನು ಮಿತವಾಗಿ ಬಳಸಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜ.15ರಿಂದ ಫೆ.15ರ ವರೆಗೆ ಒಂದು ತಿಂಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು. ಆಹಾರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್ ಅನಿಲಕುಮಾರ್ ಮತ್ತಿತರಿದ್ದ ರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ