ಗೋಪಾಲನ ಊರಿನಲ್ಲಿ ಸಿಎಂರಿಂದ ಗೋಪೂಜೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

ಉಡುಪಿ: ರಾಜ್ಯ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಗೋಪಾಲನ ಊರು ಉಡುಪಿಯಲ್ಲಿ ಗೋಪೂಜೆ ಮಾಡುವ ಮೂಲಕ ಜಾರಿಗೆ ತಂದಿದ್ದಾರೆ.
ಉಡುಪಿಯ ಕರಂಬಳ್ಳಿ ಶ್ರೀವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಲಕ್ಷ್ಮೀ ಮತ್ತು ಸುರಭಿ ಗೋವುಗಳಿಗೆ ಪೂಜೆ ಮಾಡಿ, ಗೋ ಗ್ರಾಸ ನೀಡುವ ಮೂಲಕ ಮುಖ್ಯಮಂತ್ರಿ ಅವರು ನೂತನ ಕಾಯ್ದೆಯನ್ನು ಜಾರಿಗೆ ತಂದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಹಾತ್ಮಗಾಂ ಅವರ ರಾಮರಾಜ್ಯದ ಕನಸು ನನಸಾಗುತ್ತಿದೆ. ಸ್ವಾತಂತ್ರ್ಯ ಸಿಕ್ಕಿದ ತಕ್ಷಣ ಗೋಹತ್ಯೆ ನಿಷೇಧವಾಗಬೇಕೆಂದು ಅವರು ಬಯಸಿದ್ದರು. ಕರ್ನಾಟಕದಲ್ಲಿ ಇವತ್ತಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗುತ್ತಿದೆ. ಇದೊಂದು ಐತಿಹಾಸಿಕ ನಿರ್ಣಯ. ಜನರು ಸಹಕರಿಸಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್ ಮೊದಲಾದವರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ