ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಮತ್ತು ಭಾಗ್ಯಲಕ್ಷ್ಮಿ ಯೋಜನೆಯಡಿ ಚೆಕ್ ವಿತರಿಸಿದರು. ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು. ನಂತರ ಕುಂದಾಪುರದ ಕುಂಬಾಶಿಗೆ ಭೇಟಿ ನೀಡಿದ ಮುಖ್ಯಮಂತ್ರಿ, ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸುತ್ತಿದೆ. ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿರಿಸಿ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಾಗುವುದು, ನೂತನವಾಗಿ ಆಯ್ಕೆಯಾದ ಸಚಿವರುಗಳಿಗೆ ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು ಎಂದರು. ರಾಜ್ಯಾದ್ಯಂತ ಇರುವ ಬಿಲ್ಲವ, ಈಡಿಗ, ನಾಮಾಧಾರಿ ಮತ್ತಿತರ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಈ ಬಾರಿಯ ಬಜೆಟ್ ನಲ್ಲಿ 50 ಕೋಟಿ ರೂಪಾಯಿ ಮೀಸಲಿರಿಸಲು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ತಂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿತು.
Related Articles
ಉಪಚುನಾವಣೆ: ಶಿವಮೊಗ್ಗದ ಶಿಕಾರಿಪುರ ಮತಗಟ್ಟೆಯಲ್ಲಿ ಬಿಎಸ್ ವೈ ಮತ್ತು ಕುಟುಂಬ ಮತ ಚಲಾವಣೆ
November 3, 2018
Samachar Network-CLB
ರಾಜ್ಯ
Comments Off on ಉಪಚುನಾವಣೆ: ಶಿವಮೊಗ್ಗದ ಶಿಕಾರಿಪುರ ಮತಗಟ್ಟೆಯಲ್ಲಿ ಬಿಎಸ್ ವೈ ಮತ್ತು ಕುಟುಂಬ ಮತ ಚಲಾವಣೆ
Seen By: 62 ಶಿವಮೊಗ್ಗ: ಪ್ರತಿಷ್ಠೆ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತರಾಗಿ ಬಂದು [more]
ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ: ಮಂಡ್ಯ ಸಂಸದೆ ಸುಮಲತಾ
May 26, 2019
Samachar Network-CLB
ರಾಜ್ಯ
Comments Off on ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ: ಮಂಡ್ಯ ಸಂಸದೆ ಸುಮಲತಾ
Seen By: 78 ಬೆಂಗಳೂರು: ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದವರು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲಾಗದು, ಒಂದು ಪಕ್ಷಕ್ಕೆ ಬೆಂಬಲ [more]
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
May 1, 2018
Samachar Network-CLB
ರಾಜ್ಯ, ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
Seen By: 104 ಉಡುಪಿ:ಮೇ-1: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರು ದೇಶದ ಹಿರಿಯ ನಾಯಕರು. ಅವರನ್ನು [more]