ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಮತ್ತು ಭಾಗ್ಯಲಕ್ಷ್ಮಿ ಯೋಜನೆಯಡಿ ಚೆಕ್ ವಿತರಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಮತ್ತು ಭಾಗ್ಯಲಕ್ಷ್ಮಿ ಯೋಜನೆಯಡಿ ಚೆಕ್ ವಿತರಿಸಿದರು. ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು. ನಂತರ ಕುಂದಾಪುರದ ಕುಂಬಾಶಿಗೆ ಭೇಟಿ ನೀಡಿದ ಮುಖ್ಯಮಂತ್ರಿ, ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸುತ್ತಿದೆ. ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿರಿಸಿ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಾಗುವುದು, ನೂತನವಾಗಿ ಆಯ್ಕೆಯಾದ ಸಚಿವರುಗಳಿಗೆ ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು ಎಂದರು. ರಾಜ್ಯಾದ್ಯಂತ ಇರುವ ಬಿಲ್ಲವ, ಈಡಿಗ, ನಾಮಾಧಾರಿ ಮತ್ತಿತರ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಈ ಬಾರಿಯ ಬಜೆಟ್ ನಲ್ಲಿ 50 ಕೋಟಿ ರೂಪಾಯಿ ಮೀಸಲಿರಿಸಲು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ತಂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ