ಪೊಷಕರು-ಶಾಲೆಗಳ ಸ್ಥಿತಿಗತಿ ತಿಳಿದು ನಿರ್ಧಾರ ಇನ್ನೆರಡು ದಿನದಲ್ಲಿ ಖಾಸಗಿ ಶಾಲೆ ಶುಲ್ಕ ನಿಗದಿ: ಸಚಿವ

ಶಿವಮೊಗ್ಗ: ಖಾಸಗಿ ಶಾಲೆಗಳ ಶುಲ್ಕ ವಿಚಾರದ ಬಗ್ಗೆ ಇನ್ನೆರೆಡು ದಿನದಲ್ಲಿ ಘೋಷಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್
ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಖಾಸಗಿ ಶಾಲೆಗಳ ಶುಲ್ಕ ನೀತಿ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರು ಖಾಸಗಿ ಶಾಲೆಗಳ ಮುಖ್ಯಸ್ಥರು ಪೊಷಕ ಪ್ರತಿನಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಕೋವಿಡ್ ಕಾರಣದಿಂದಾಗಿ ಪೊಷಕರ ಸ್ಥಿತಿ ಜರ್ಜರಿತವಾಗಿದೆ. ಅದೇ ರೀತಿ ಶಿಕ್ಷಣ ಸಂಸ್ಥೆಗಳು ಶುಲ್ಕ ವಸೂಲಿ ಆಗದ ಹಿನ್ನೆಲೆಯಲ್ಲಿ ಅರ್ಧವೇತನ ನೀಡಿರುವ ಮಾಹಿತಿಯೂ ಇದೆ. ಎರಡೂ ಅಂಶವನ್ನು ಗಮನದಲ್ಲಿರಿಸಿಕೊಂಡು ಶುಲ್ಕ ನೀತಿಯನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಬ್ರಿಡ್ಜ್ ಕೋಸ್ ಆರಂಭ:
ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ ಹಿಂದಿನ ತರಗತಿಗಳ ಪಠ್ಯ ಅವಲೋಕನ ಮಾಡುವ ಸಲುವಾಗಿ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ 45 ದಿನಗಳ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ನಿವೃತ್ತರಿಗೂ ಬೋಸಲು ಅವಕಾಶ:
ಇನ್ನು ರಾಜ್ಯದಲ್ಲಿ ಹೆಚ್ಚು ಮಕ್ಕಳು ಇರುವಲ್ಲಿ ಅತಿಥಿ ಶಿಕ್ಷಕರನ್ನು ತೆಗೆದುಕೊಳ್ಳುವ ಬಗ್ಗೆ ಅಕಾರಿಗಳಿಂದ ಮಾಹಿತಿ ಕೇಳಲಾಗಿದೆ. ಇದಕ್ಕೆ ಅನುಮತಿ ನೀಡಲಾಗುವುದು. ಇದರ ಜೊತೆಗೆ ಈ ಬಾರಿ ನಿವೃತ್ತಿಯಾದವರಿಗೆ ಬೋಧನೆ ಮಾಡಲು ಮುಂದುವರಿಸುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ