ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆಯಡಿ ವಿಪೊ ಸಂಸ್ಥಾಪಕ ಅಜೀಂ ಪ್ರೇಮ್ ಜಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಇಂಡಿಯಾ ಅವೇಕ್ ಫಾರ್ ಟ್ರಾನ್ಸಪರೆನ್ಸಿ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಈ ಮಹತ್ವದ ಆದೇಶ ಮಾಡಿದೆ.
ಆರ್ಬಿಐ ಕಾಯ್ದೆಯ ಸೆಕ್ಷನ್ 451(ಎ) ಪ್ರಕಾರ ನೋಂದಣಿ ಮಾಡಿಸದೆ ಬ್ಯಾಂಕಿಂಗ್ಯೇತರ ಹಣಕಾಸು ವಹಿವಾಟು ನಡೆಸುವಂತಿಲ್ಲ. ಆದರೆ, ಅಜೀಂ ಪ್ರೇಮ್ ಜಿ ಸೇರಿದಂತೆ ಕಂಪನಿಯ ಹಲವು ನಿರ್ದೇಶಕರು ಅನಕೃತವಾಗಿ ಬ್ಯಾಂಕಿಂಗ್ಯೇತರ ಹಣಕಾಸು ವ್ಯವಹಾರ ನಡೆಸುತ್ತಿ. ಹೀಗಾಗಿ, ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವಂತೆ ಕೋರಿ ಅರ್ಜಿದಾರರು ಆರ್ಬಿಐಗೆ ದೂರು ನೀಡಿದ್ದರು.
ದೂರಿಗೆ ಆರ್ಬಿಐ ಉತ್ತರ ನೀಡಿದ್ದರೂ ಅರ್ಜಿದಾರರು ಅೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಅದು 2020ರ ಜು.28ರಂದು ವಜಾಗೊಂಡ ಕಾರಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ಹೈಕೋರ್ಟ್, ಅರ್ಜಿದಾರರು ಮಾಡಿದ್ದ ದೂರಿಗೆ ಆರ್ಬಿಐ 2017ರ ಸೆ.5ರಂದು ಉತ್ತರ ನೀಡಿದೆ. ಆದರೂ, ಅರ್ಜಿಯನ್ನು ಸಲ್ಲಿಸಿ ನ್ಯಾಯಾಂಗವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅರ್ಜಿದಾರರಿಗೆ ಏನೇ ತಕರಾರು ಇದ್ದರೂ, ಅವರು ಸೂಕ್ತ ವೇದಿಕೆಯಲ್ಲಿ ಪರಿಹಾರ ಕಂಡುಕೊಳ್ಳಬಹುದು. ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಖಾಸಗಿ ದೂರು ಸಲ್ಲಿಸುವುದು ಅಥವಾ ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸುವ ಆದೇಶವನ್ನು ನೀಡಲಾಯಿತು.