ಹೊಸದಿಲ್ಲಿ: ಭಾರತದಲ್ಲಿ ಫೇಸ್ಬುಕ್ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಕೆಂಬ್ರಿಡ್ಜ್ ಅನಾಲಿಟಿಕಾ ಆ್ಯಂಡ್ ಗ್ಲೋಬಲ್ ಸಾಯನ್ಸ್ ರಿಸರ್ಚ್ ಸಂಸ್ಥೆಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.
ಕೆಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯು 2014ರಲ್ಲಿ ಸಂಶೋಧನೆ ಮತ್ತು ಶಿಕ್ಷಣ ಉದ್ದೇಶಕ್ಕಾಗಿ ದಿಸ್ ಈಸ್ ಯುವರ್ ಡಿಜಿಟಲ್ ಲೈಫ್ ಆ್ಯಪ್ ಆರಂಭಿಸಿ ಫೇಸ್ಬುಕ್ ಬಳಕೆದಾರರ ನಿರ್ದಿಷ್ಟ ಮಾಹಿತಿಗಳನ್ನು ಸಂಗ್ರಹಿಸಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ವಾಣಿಜ್ಯ ಉದ್ದೇಶಕ್ಕಾಗಿ ಕೆಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ ದಾಖಲೆಗಳನ್ನು ಸಂಗ್ರಹಿಸಲು ಅನುಮತಿ ನೀಡುವ ಮೂಲಕ ಫೇಸ್ಬುಕ್ ಸಂಸ್ಥೆಯು ಕ್ರಿಮಿನಲ್ ಪಿತೂರಿಗೆ ಅವಕಾಶ ಮಾಡಿಕೊಟ್ಟಿತ್ತು ಎಂದು ಸಿಬಿಐ ಅಕಾರಿಗಳು ತಿಳಿಸಿದ್ದಾರೆ.