ಅಕ್ರಮ ಸಕ್ರಮದ ಹೇಳಿಕೆಯನ್ನೇ ನೀಡಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ ಅಕ್ರಮ ಗಣಿಗಾರಿಕೆ ನಿಲ್ಲಿಸಿ

ಶಿವಮೊಗ್ಗ : ರಾಜ್ಯಾದಂತ ಹಲವೆಡೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಲು ಜಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು
ಎಲ್ಲಿಯೂ ಹೇಳಿಲ್ಲ. ಗಣಿಗಾರಿಕೆ ನಡೆಸುತ್ತಿರುವವರು ಪರವಾನಿಗೆಗೆ ಅರ್ಜಿ ಸಲ್ಲಿಸಿದ ಬಳಿಕ, ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಯಾರಿಗೂ ಅನಾನುಕೂಲ ಆಗದೆ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಮಾತ್ರ ಅನುಮತಿ ನೀಡಬಹುದಾಗಿದೆ. ಆದರೆ, ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಲಾಗುವುದಿಲ್ಲ. ಅಕ್ರಮ ಗಣಿಗಾರಿಕೆ ನಡೆದರೆ ಸಂಬಂಧಪಟ್ಟ ಅಕಾರಿಗಳೇ ಜವಾಬ್ದಾರರು ಎಂದು ಸ್ಪಷ್ಟಪಡಿಸಿದರು.
ಕೆಆರ್‍ಎಸ್‍ಗಿರುವ ಅಪಾಯ ತಪ್ಪಿಸಿ:
ರಾಜ್ಯದ ಡೆ ಅಕ್ರಮ ಗಣಿಗಾರಿಕೆ ಸಮಸ್ಯೆ ಇದೆ. ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಜಲಾಶಯಕ್ಕೆ ಧಕ್ಕೆ ಬರುವ ಅಪಾಯವಿದೆ. ಈಗಾಗಲೆ ಅಲ್ಲಿನ ಗಣಿಗಾರಿಕೆ ಸಂಪೂರ್ಣವಾಗಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಬೇಕೇ ಬೇಕು. ಕಾನೂನು ಚೌಕಟ್ಟಿನಲ್ಲಿ
ಜಲ್ಲಿ-ಕಲ್ಲು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿ ಮಾಡುವವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ