ಬೆಂಗಳೂರು: ಅಂತೂ ಖಾಸಗಿ ಶಾಲೆಗಳ ಶುಲ್ಕ ನಿಗದಿಯಾಗಿದ್ದು, 2019-20ನೇ ಸಾಲಿನ ಬೋಧನಾ ಶುಲ್ಕದ ಶೇ.70ರಷ್ಟನ್ನು ಮಾತ್ರ 2020-21ನೇ ಸಾಲಿನ ಒಟ್ಟಾರೆ ಶುಲ್ಕವಾಗಿ ಪಡೆಯಬೇಕೆಂದು ಶಾಲಾ ಆಡಳಿತ ಮಂಡಳಿಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಿಂದಾಗಿ ಬೋಧನಾ ಶುಲ್ಕ ವಿಚಾರವಾಗಿ ಪೊಷಕರಿಗೆ ಸ್ವಲ್ಪಮಟ್ಟಿನ ರಿಲೀಫ್ ಸಿಕ್ಕಂತಾಗಿದೆ. ಆದರೆ, ಕೆಲ ಪೊಷಕರು ಶುಲ್ಕದ ಅರ್ಧದಷ್ಟು ಇಳಿಸಬೇಕಿತ್ತು ಎಂದು ಆಕ್ಷೇಪ ಎತ್ತಿದ್ದಾರೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿಯಿಂದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸೋಮವಾರ ಸಭೆ ನಡೆಸಿ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್, ಕೊರೋನಾ ಹಿನ್ನೆಲೆಯಲ್ಲಿ ಜನರೂ ಆರ್ಥಿಕ ನಷ್ಟ ಅನುಭವಿಸಿದ್ದು, ಶಾಲಾ ಶುಲ್ಕ ಪಾವತಿಸುವ ಸ್ಥಿತಿಯಲ್ಲಿರಲಿಲ್ಲ. ಪೊಷಕರು ಶುಲ್ಕ ಕಟ್ಟದೆಯೇ ಶಾಲೆಗಳನ್ನು ನಡೆಸುವುದು ಹಾಗೂ ಸಿಬ್ಬಂದಿಗೆ ವೇತನ ಪಾವತಿಸುವುದು ಆಡಳಿತ ಮಂಡಳಿಗಳಿಗೆ ಕಷ್ಟವಾಗಿತ್ತು. ಹೀಗಾಗಿ ಸರ್ಕಾರ ಮಧ್ಯಪ್ರವೇಶಿಸಿ ಈ ನಿರ್ಣಯ ಕೈಗೊಂಡಿದೆ ಎಂದರು.
ಶಿಕ್ಷಣ ಕಾಯಿದೆಯನುಸಾರ, ಶುಲ್ಕ ನಿಯಂತ್ರಣಕ್ಕೆ ಸಂಬಂಸಿದಂತೆ ಸರ್ಕಾರಕ್ಕಿರುವ ಅಕಾರ, ಅಸಾಧಾರಣ ಸನ್ನಿವೇಶವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕಾಯಿದೆಯ ಅವಕಾಶಗಳನ್ನು ಉ¯್ಲÉೀಖಿಸಿ ಸರ್ಕಾರದ ಪರಮಾಕಾರದ ಕುರಿತಂತೆ ನಿಲುವು ತೆಗೆದುಕೊಳ್ಳಲು ನಿರ್ಣಯಿಸಲಾಗಿದೆ. ಬಹುಚರ್ಚಿತ ವಿಷಯಕ್ಕೆ ಕೊನೆಗೂ ತೆರೆ ಬಿದ್ದಿದೆ.
ಈ ಸಾಲಿಗೆ ಸೀಮಿತಗೊಂಡಂತೆ ರಾಜ್ಯದಲ್ಲಿರುವ ಯಾವುದೇ ಮಾದರಿಯ ಪಠ್ಯಕ್ರಮವನ್ನು ಬೋಸುವ ಖಾಸಗಿ ಶಾಲೆಗಳು ಕಳೆದ ಸಾಲಿನ ಅಂದರೆ 2019-20ನೇ ಸಾಲಿನ ಬೋಧನಾ ಶುಲ್ಕದ ಶೇ.70ರಷ್ಟು ಭಾಗವನ್ನು ಮಾತ್ರ ಪೊಷಕರಿಂದ ಈ ಸಾಲಿನ ಒಟ್ಟು ಶುಲ್ಕವಾಗಿ ಪಡೆಯಬೇಕು. ಈ ಬಾರಿ ಅವ ಶುಲ್ಕವನ್ನು ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕಗಳನ್ನು ಶಾಲೆಗಳು ಪಡೆಯುವಂತಿಲ್ಲ. ವಿವಿಧ ಟ್ರಸ್ಟ್ಗಳಿಗೆ ಯಾವುದೇ ವಂತಿಕೆಯನ್ನು ಪಡೆಯುವಂತಿಲ್ಲ.
ಕಡಿಮೆ ಶುಲ್ಕ ಪಡೆಯಲು ತಕರಾರಿಲ್ಲ
2020-21ನೇ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಮೇಲೆ ತಿಳಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದಿದ್ದಲ್ಲಿ 2021-22ನೇ ಸಾಲಿನಲ್ಲಿ ಪಾವತಿಸಬೇಕಾದ ಶುಲ್ಕಕ್ಕೆ ಹೊಂದಾಣಿಕೆಯನ್ನು ಮಾಡಿಕೊಳ್ಳಬಹುದು. ಯಾವುದೇ ಶಿಕ್ಷಣ ಸಂಸ್ಥೆ ಮೇಲೆ ತಿಳಿಸಿರುವ ಶುಲ್ಕಕ್ಕಿಂತ ಕಡಿಮೆ ಶುಲ್ಕವನ್ನು ವಿಸಲು ಇಚ್ಛಿಸಿದಲ್ಲಿ, ಅದಕ್ಕೆ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ.
ಕಂತು ರೂಪದಲ್ಲಿ ಪಾವತಿಗೆ ಅವಕಾಶ
ಶುಲ್ಕವನ್ನು ಕಂತುಗಳಲ್ಲಿ ಪಾವತಿಸಲು ಸಹ ಪೊಷಕರಿಗೆ ಅವಕಾಶವನ್ನು ಕಲ್ಪಿಸಬೇಕು. ಶುಲ್ಕ ರಿಯಾಯಿತಿ ಕುರಿತಂತೆ ಪೊಷಕರು, ಶಾಲೆಗಳು ಯಾವುದೇ ತಕರಾರು ಹೊಂದಿದ್ದಲ್ಲಿ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಅಕಾರಯುಕ್ತ ಸಮಿತಿ ರಚಿಸಿ ಅದರ ಮೂಲಕ ಇಂತಹ ದೂರು ಪ್ರಕರಣಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶಕುಮಾರ್ ಸ್ಪಷ್ಟಪಡಿಸಿದರು.