ಎರಡುವರೆ ವರ್ಷವೂ ಬಿಎಸ್‍ವೈ ಸಿಎಂ

ಬಂಟ್ವಾಳ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅವಯನ್ನು ಪೂರ್ಣಗೊಳಿಸಲಿದ್ದಾರೆಂದು ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಊಹಾಪೊಹಗಳಿಗೆ ಕಿವಿಗೊಡುವುದು ಬೇಡ. ಮುಂದಿನ ಎರಡೂವರೆ ವರ್ಷದವರೆಗೆ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆಂದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಇನ್ನು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಪ್ರಯತ್ನ ಆಗುತ್ತಿದೆ. ಮುಂದಿನ ದಿನದಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಹೇಳಿದರು.

ಈಗಾಗಲೇ ಯತ್ನಾಳ್ ಅವರಿಗೆ ಕೇಂದ್ರನಾಯಕರು ಎಚ್ಚರಿಕೆ ಕೂಡ ನೀಡಿದ್ದಾರೆ. ಪಕ್ಷದ ವಿರುದ್ಧ ಬೇಕಾಬಿಟ್ಟಿ ಹೇಳಿಕೆ ನೀಡುವುದು ಸರಿಯಲ್ಲ. ಕೇಂದ್ರ ಈ ಬಗ್ಗೆ ಶಿಸ್ತು ಕ್ರಮ ತೆಗೆದುಕೊಳ್ಳಲಿದೆ ಎಂದರು.

ರಾಜಕಾರಣದಲ್ಲಿ ಎಲ್ಲರಿಗೂ ಮುಂದೆ ಬರಬೇಕೆಂಬ ಇಚ್ಛೆ ಇರುತ್ತದೆ. ಆದರೆ ಯಾರನ್ನೋ ತುಳಿದು ಮೇಲೆ ಬರಬೇಕಾಗಿಲ್ಲ.ಅದರ ಬದಲಿಗೆ ಉತ್ತಮ ಕೆಲಸ ಮಾಡಿ, ಜನಮನ್ನಣೆ ಗಳಿಸಿ ಸ್ಥಾನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ