ಬಂಟ್ವಾಳ: ಜನಪ್ರಿಯತೆಗೋಸ್ಕರ ಮಹಾರಾಷ್ಟ್ರ ಮುಖ್ಯಮಂತ್ರಿ ಪದೇ ಪದೇ ಗಡಿ ವಿಚಾರವನ್ನು ತೆಗೆಯುತ್ತಿದ್ದಾರೆ. ಮಹಾಜನ್ ವರದಿ ರಿಪೊರ್ಟ್ ಕೊಟ್ಟ ಬಳಿಕವೂ ಹುಚ್ಚು ಹೇಳಿಕೆ ಕೊಡುತ್ತಿರುವುದರಿಂದ ಅವರನ್ನು ಹುಚ್ಚ ಅಂತ ಕರಿಬೇಕಾಗುತ್ತದೆ ಎಂದು ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಯಾವ ವ್ಯಕ್ತಿಯ ಜನಪ್ರಿಯತೆ ಕಡಿಮೆಯಾಗುತ್ತದೋ ಆಗ ಆತ ಯಾರು ಬಲಿಷ್ಠ ನಾಗಿರುತ್ತಾನೋ ಅವನಿಗೆ ಬೈಯುತ್ತಾನೆ. ಮಹಾರಾಷ್ಟ್ರ ಮುಖ್ಯಮಂತ್ರಿಯವರ ಪಾಪ್ಯುಲಾರಿಟಿ ಕಡಿಮೆಯಾಗುತ್ತಿದೆ. ಕರ್ನಾಟಕದ ಭೂಮಿ ಬಗ್ಗೆ ಮಾತನಾಡಿದರೆ ಮರಾಠಿಗರು ತನ್ನ ಪರವಾಗಿ ಇರುತ್ತಾರೆ ಎನ್ನುವ ಭ್ರಮೆಯಲ್ಲಿ ಅವರಿದ್ದಾರೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದರು.