ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ದೂರು

ಬೆಂಗಳೂರು: ದ್ವೇಷ ಭಾವನೆ ಹುಟ್ಟು ಹಾಕುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕನ್ನಡ ಅನುಷ್ಠಾನ ಮಂಡಳಿಯ ಅಧ್ಯಕ್ಷ ಡಾ.ಆರ್.ಎ.ಪ್ರಸಾದ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮಹಾಜನ್ ವರದಿಯ ಅನುಸಾರವಾಗಿರುವ ಕರ್ನಾಟಕದ ಗಡಿ ಪ್ರದೇಶಗಳನ್ನು ರಾಜಕೀಯ ವೈಷಮ್ಯದಿಂದಾಗಿ ಬೆಳಗಾವಿ, ಕಾರವಾರ, ನಿಪ್ಪಾಣಿ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಕನ್ನಡಿಗರು, ಮರಾಠಿ ಭಾಷಿಕರ ಮಧ್ಯೆ ದ್ವೇಶದ ಭಾವನೆ, ಭಾಷಾ ದುಳ್ಳುರಿ ಬಿತ್ತಿರುವುದು ಸರಿಯಲ್ಲ. ಈ ಸಂಬಂಧ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವುದರಿಂದ ಅವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ