ರಾಜ್ಯಕ್ಕೆ 1500 ಕೋಟಿ ರೂ. ಬಿಡುಗಡೆ ನಿರೀಕ್ಷೆ: ಡಾ.ಸುಧಾಕರ್ -3ನೇ ಅಲೆ ಎದುರಿಸಲು ಕೇಂದ್ರದ ನೆರವು

ಬೆಂಗಳೂರು : ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1500 ಕೋಟಿ ರೂ.ನೆರವು ಸಿಗಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.

ಬೆಂಗಳೂರಿನ ಜಯನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಯುನೈಟೆಡ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕಾ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮೂರನೇ ಅಲೆಯನ್ನು ನಿರ್ವಹಿಸಲು 23 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂ. ನೆರವು ದೊರೆಯಲಿದೆ. ಈ ಅನುದಾನವನ್ನು ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮಥ್ರ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ನೇತೃತ್ವದಲ್ಲಿ 3ನೇ ಅಲೆಗೆ ಅಗತ್ಯವಿರುವ ಸಿದ್ದತೆ ನಡೆಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕವನ್ನು ದೇಶದೆಲ್ಲೆಡೆ ಆರೋಗ್ಯ ಕ್ಷೇತ್ರದಲ್ಲಿ ಮಾದರಿ ರಾಜ್ಯವನ್ನಾಗಿಸಲು ಎಲ್ಲ ಪ್ರಯತ್ನ ನಡೆಸಿದೆ. ಈ ವಿಷಯದಲ್ಲಿ ಸಫಲತೆ ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ. ಕೊರೋನಾ ಸಾಂಕ್ರಾಮಿಕ ಹೆಚ್ಚಾಗಿದ್ದಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಶ್ಲಾಘನೀಯ ಎಂದು ಸಚಿವರು ತಿಳಿಸಿದರು.

ಮುಗಳಖೋಡ-ಜಿಡಗಾ ಮಠದ ಪೀಠಾಪತಿ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮಿ, ಮಾಜಿ ಸಚಿವರಾದ ಪಿಜಿಆರ್ ಸಿಂಧ್ಯಾ, ರಾಣಿ ಸತೀಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕರಾದ ಪಿ.ರಾಜೀವ, ಲಕ್ಷ್ಮೀ ಹೆಬ್ಬಾಳ್ಕರ್, ಯುನೈಟೆಡ್ ಆಸ್ಪತ್ರೆಯ ಸಿಎಂಡಿ ಡಾ.ವಿಕ್ರಮ್ ಸಿದ್ದರೆಡ್ಡಿ ಹಾಜರಿದ್ದರು.

ಕೊರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ದೊರೆಯದೆ ಇದ್ದ ಪರಿಸ್ಥಿತಿಯ ಮಹತ್ವವನ್ನು ನಾವು ತಿಳಿದಿದ್ದೇವೆ. ಎಲ್ಲರಿಗೂ ಈಗ ಆರೋಗ್ಯ ಕಾಳಜಿಯೂ ಹೆಚ್ಚಿದೆ. ಹೆಲ್ತ್ ಕಾರ್ಡ್‍ಗಳ ಮೂಲಕ ಹಾಗೂ ನಿರ್ದಿಷ್ಟ ದರವನ್ನು ನಿಗದಿಪಡಿಸುವ ಮೂಲಕ ಉತ್ತಮ ಸೇವೆ ನೀಡುವ ಭರವಸೆಯನ್ನು ಹೊಸ ಆಸ್ಪತ್ರೆಯ ಆಡಳಿತ ಮಂಡಳಿ ನೀಡಿರುವುದು ಸಂತಸಕರ.
ತೇಜಸ್ವಿ ಸೂರ್ಯ, ಸಂಸದ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ