ಹೊಸದಿಲ್ಲಿ: ಮೇಕೆದಾಟು ಯೋಜನೆ ಕುರಿತಂತೆ ಕರ್ನಾಟಕ ಸರ್ಕಾರದೊಂದಿಗಿನ ಯಾವುದೇ ಮಾತುಕತೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಳ್ಳಿ ಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಯೋಜನೆಯನ್ನು ಮುಂದುವರಿಸಲು ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಜಲಶಕ್ತಿ ಸಚಿವರು ತಮಿಳುನಾಡಿಗೆ ಭರವಸೆ ನೀಡಿದ್ದಾರೆ ಎಂದರು.
ಕರ್ನಾಟಕ ಜತೆ ಮಾತುಕತೆಗೆ ಯಾವುದೇ ಮಹತ್ವವಿಲ್ಲ. ನಮ್ಮ ಜಲಸಂಪನ್ಮೂಲ ಸಚಿವರು ಮಾತುಕತೆ ಕುರಿತಂತೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಮೇಕೆದಾಟುವಿನಲ್ಲಿ ಜಲಾಶಯವನ್ನು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ವಿರೋಸಲು ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಮುಖ್ಯಮಂತ್ರಿಗಳ ಜಂಟಿ ಕಾರ್ಯತಂತ್ರದ ಅಗತ್ಯವಿಲ್ಲ ಎಂದೂ ಹೇಳಿದ್ದಾರೆ.