ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಮಂಗಳವಾರ ಪ್ರಕಟಗೊಳ್ಳಲಿದೆ. ಈ ಬಾರಿ ಕೋವಿಡ್‍ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿಲ್ಲ. ಹೀಗಾಗಿ ಪ್ರಥಮ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಪರಿಗಣಿಸಿ ಅಂಕ ನೀಡಲು ಪದವಿಪೂರ್ವ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ಮಂಗಳವಾರ ಸಂಜೆ 4 ಗಂಟೆಗೆ ದ್ವಿತೀಯ ಪಿಯುಸಿ 2020-21ರಲ್ಲಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಶಿಕ್ಷಣ ಸಚಿವರು ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಪಿಯು ಮಂಡಳಿಯ ವೆಬ್‍ಸೈಟ್ ಅಥವಾ ಬುಧವಾರ ಕಾಲೇಜುಗಳ ಸೂಚನಾ ಫಲಕದ ಮೂಲಕ ತಿಳಿದುಕೊಳ್ಳಬಹುದು.