ರಾಜ್ಯದಲ್ಲಿ ಯಾವ ನಾಯಕತ್ವವೂ ಬದಲಾಗುವುದಿಲ್ಲ. ಈಗಾಗಲೇ ಇದನ್ನು ಹಲವು ಬಾರಿ ಸ್ಪಷ್ಟಪಡಿಸಲಾಗಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ. ನಾಯಕತ್ವ ಬದಲಾವಣೆ ಎಂಬುದು ಕೇವಲ ಊಹಾಪೋಹ ಅಷ್ಟೇ ಎಂದು ಬಿಜೆಪಿಯ ಪ್ರಮುಖ ನಾಯಕರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿರುವ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಈ ಬಗ್ಗೆ ತಮ್ಮ ಅಭಿಪ್ರಾಯ ಸ್ಪಷ್ಪಪಡಿಸಿದ್ದು, ರಾಜ್ಯದ ನಾಯಕತ್ವದಲ್ಲಿ ಸದ್ಯ ಯಾವುದೇ ಬದಲಾವಣೆ ಎಂದಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹವಾಗಿದೆ. ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಈ ಹಿಂದೆ ರಾಜ್ಯಕ್ಕೆ ಭೇಟಿ ನೀಡಿದ್ದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಕೂಡ ನಾಯಕತ್ವ ಬದಲಾವಣೆ ಕೇವಲ ವದಂತಿ ಎಂಬುದನ್ನು ಖಚಿತಪಡಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸಲು ಹಲವರು ಪ್ರಯತ್ನ ಮಾಡುತ್ತಿದ್ದಾರೆಂದೂ ಹೇಳಿದ್ದರು.
ನಮ್ಮ ಮುಖ್ಯಮಂತ್ರಿಯವರು ಬಹಳ ಗಟ್ಟಿಯಾಗಿದ್ದಾರೆ, ಅವರೇ ನಮ್ಮ ನಾಯಕರು. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ನಾಯಕತ್ವ ಬದಲಾವಣೆಯ ಪ್ರಸ್ತಾಪ ನಮ್ಮ ಪಕ್ಷದ ಮುಂದಿಲ್ಲ ಎಂದು ಪುನರುಚ್ಛರಿಸಿದರು.
ಸಿದ್ದಗಂಗಾಶ್ರೀ : ಸಿದ್ದಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾೀಶರು ಬುಧವಾರ ಸಿಎಂ ನಿವಾಸಕ್ಕೆ ಭೇಟಿ ನೀಡಿ ಶ್ರೀರಕ್ಷೆ ನೀಡಿದರು.
2022ರ ಏಪ್ರಿಲ್ ತಿಂಗಳಲ್ಲಿ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115 ವರ್ಷದ ಹುಟ್ಟುಹಬ್ಬ ಬರಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆಗೆ ಸಂಬಂಸಿದಂತೆ ಸಿಎಂ ಜೊತೆ ಚರ್ಚೆ ನಡೆಸಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪೂರ್ಣಾವವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಸೂಕ್ತ. 75 ವರ್ಷ ಮೀರಿದ ಅನೇಕರಿಗೆ ಪಕ್ಷದ ನಿಯಮದಂತೆ ಅಕಾರ ನೀಡಿಲ್ಲ. ಆದರೆ, ತಮಗೆ ನೀಡಿದ್ದು, ಅದನ್ನು ಉಳಸಿಕೊಂಡಿದ್ದೇನೆ. ಹೈಕಮಾಂಡ್ ಆದೇಶಕ್ಕೆ ತಲೆ ಬಾಗುತ್ತೇನೆ. ಇದುವರೆಗೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ವತಃ ಸಿಎಂ ಹೇಳಿದ್ದಾರೆ. ಹೀಗಾಗಿ ಅವರಿಗೆ ಶ್ರೀರಕ್ಷೆ ಇದ್ದೇ ಇದೆ ಎಂದರು.
ವಿವಿಧ ಮಠಾೀಶರಿಂದ ಶ್ರೀರಕ್ಷೆ
ವದಂತಿಗಳಿಗೆ ಕಿವಿಗೊಡದಂತೆ ಶ್ರೀರಕ್ಷೆ ನೀಡಿರುವ ವಿವಿಧ ಮಠಾೀಶರು, ಸಿಎಂ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ಆಗಬಾರದೆಂಬ ಅಭಿಪ್ರಾಯ ಮಂಡಿಸಿದರು. ಸಿದ್ದಗಂಗಾಶ್ರೀಗಳು ಮಾತ್ರವಲ್ಲದೆ, ಸಾಣೆಹಳ್ಳಿ ಶ್ರೀಗಳು, ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾೀಶರು ನಾಯಕತ್ವ ಬದಲಾವಣೆ ಸೂಕ್ತವಲ್ಲ ಎಂದಿದ್ದಾರೆ. ವೀರಶೈವ, ಲಿಂಗಾಯತ ಮಠಾೀಶರು ಮಾತ್ರವಲ್ಲದೆ, ಕಾಗಿನೆಲೆ ಸಂಸ್ಥಾನ ಸಹಿತ ವಿವಿಧ ಸಮುದಾಯದ ಸ್ವಾಮೀಜಿಗಳೂ ಇದೇ ಅಭಿಪ್ರಾಯ ಮಂಡಿಸಿದ್ದಾರೆ.
ಬದಲಾವಣೆ ಸದ್ಯಕ್ಕಿಲ್ಲ
ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಹಂಚಿಕೊಂಡರು.
ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಎಂದರೆ ಹಾಗೆಯೇ. ದಿನಕ್ಕೊಂದು ತಿರುವುಗಳು,ದಿನಕ್ಕೊಂದು ಸನ್ಣಪುಟ್ಟ ವ್ಯತ್ಯಾಸಗಳು ಇದೆಲ್ಲಾ ಆಗುತ್ತವೆ. ನನಗೆ ತಿಳಿದ ಪ್ರಕಾರ ಮೊನ್ನೆ ಮುಖ್ಯಮಂತ್ರಿಗಳು ದಿಲ್ಲಿಯಲ್ಲಿ ಪ್ರಧಾನಿಗಳನ್ನು, ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ರಾಜ್ಯದ ಎಲ್ಲಾ ವಿದ್ಯಾಮಾನಗಳನ್ನು ವಿವರಿಸಿದ್ದಾರೆ. ಇವತ್ತು ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ದಿಟ್ಟ ಹೆಜ್ಜೆ ಅಭಿವೃದ್ಧಿ ವಿಚಾರದಲ್ಲಿ ಕೈಗೊಂಡ ಕಾರ್ಯಕ್ರಮಗಳು ಇವುಗಳನ್ನೆಲ್ಲ ನೋಡಿ ಪ್ರಧಾನಿಗಳು ಅಭಿನಂದಿಸಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಮಠ ಮಂದಿರಗಳು, ಸಾರ್ವಜನಿಕರು, ವಿರೋಗಳು ಬೆಂಬಲಿಸುತ್ತಾರೆ ಎಂದರು.
ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುವುದು ಊಹಾಪೋಹ. ಪ್ರಧಾನಿಯೊಂದಿಗಿನ ಸಾಮರಸ್ಯ ನೋಡಿದಾಗ ಬದಲಾವಣೆ ಇಲ್ಲ ಅನಿಸುತ್ತದೆ. ಉಳಿದಂತೆ ಎಲ್ಲಾ ನಮ್ಮ ರಾಷ್ಟ್ರೀಯ ನಾಯಕರು ಚರ್ಚೆ ಮಾಡುತ್ತಾರೆ. ಸದ್ಯಕ್ಕೆ ಬದಲಾವಣೆ ವಿಚಾರ ಊಹಾಪೋಹ ಎಂದರು.
ಸಚಿವ ಸಂಪುಟ ಸಭೆ ಇಂದು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜು.22 ರ ಗುರುವಾರ ಸಂಜೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ನಾಯಕತ್ವ ಬದಲಾವಣೆಯ ಯಾವ ಪ್ರಮೇಯವೂ ಉದ್ಭವಿಸುವ ಸಾಧ್ಯತೆಗಳಿಲ್ಲ ಎಂಬುದಕ್ಕೆ ಇದೂ ಒಂದು ನಿದರ್ಶನ.
ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾೀಶರ ಆಶಯವಾಗಿದೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಸಿದ್ದಲಿಂಗ ಸ್ವಾಮೀಜಿ, ಸಿದ್ದಗಂಗಾ ಮಠ
ಬಿಜೆಪಿ ವರಿಷ್ಠರು ಯಾವುದೇ ಕಾರಣಕ್ಕೂ ಯಡಿಯೂರಪ್ಪ ಬದಲಾವಣೆ ಮಾಡಬಾರದು. ಉಳಿದ ಎರಡು ವರ್ಷ ಅಕಾರ ಪೂರ್ಣ ಗೊಳಿಸಲು ಅವಕಾಶ ನೀಡಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ಹಾನಿಯಾಗಲಿದೆ. ಇದನ್ನು ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಬೇಕು.
ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ತರಳಬಾಳು ಮಠ
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ.
ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ