ಬೆಂಗಳೂರು, ಆ.6- ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕಪ್ರ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ನಿಷೇಧಾಜ್ಞೆಯನ್ನು ಕಠಿಣಗೊಳಿಸಲು ನಿರ್ಧರಿಸಲಾಗಿದೆ. ಜೊತೆಗೆ ಆಗಸ್ಟ್ 23ರಿಂದ ಶಾಲಾ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಾದ ಕಲಬುರಗಿ, ಮೈಸೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೀದರï, ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ವಾರಾಂತ್ಯದ ಕಫ್ರ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾಜ್ಯದಲ್ಲಿ ರಾತ್ರಿ ಕಫ್ರ್ಯೂ ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲು ಚರ್ಚಿಸಲಾಗಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಕೋವಿಡï ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಟಾಸ್ಕ್ಫೆÇೀರ್ಸ್ ಅಧ್ಯಕ್ಷ ಹಾಗೂ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ನಗರ ಪೆÇಲೀಸ್ ಆಯುಕ್ತ ಕಮಲ್ಪಂತ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.