ಕಟ್ನಿ-ಚೋಪನ್ ಪ್ರಯಾಣಿಕರ ರೈಲು ಹಳಿ ತಪ್ಪಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ:

ಕಟ್ನಿ, ಏ.15-ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸಾಲ್ನಾ-ಪಿಪರಿಂiÀiಕಾಲ ಬಳಿ ನಿನ್ನೆ ರಾತ್ರಿ ಕಟ್ನಿ-ಚೋಪನ್ ಪ್ರಯಾಣಿಕರ ರೈಲು ಹಳಿ ತಪ್ಪಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಟ್ನಿ ರೈಲು ನಿಲ್ದಾಣದಿಂದ 30 ಕಿ.ಮೀ.ದೂರದಲ್ಲಿ ಈ ಘಟನೆ ನಡೆದಿದೆ. ರೈಲಿನ ಐದು ಕೋಚ್‍ಗಳು ಹಳಿ ತಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ರೈಲ್ವೆ ರಕ್ತಣಾ ಪಡೆದ ನಿರೀಕ್ಷಕ ವೀರೇಂದ್ರ ಸಿಂಗ್ ತಿಳಿಸಿದ್ದಾರೆ.
ಸ್ಥಳಕ್ಕೆ ರೈಲ್ವೆ ಮತ್ತು ಪೆÇಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವಾಣ್ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಬಿಹಾರದ ಕಿಯುಲ್ ರೈಲು ನಿಲ್ದಾಣದ ಬಳಿ ನಿನ್ನೆ ಬೆಳಗ್ಗೆ ಲಖಿಸರೈ-ಮೌರ್ಯ ಎಕ್ಸ್‍ಪ್ರೆಸ್ ರೈಲಿನಲ್ಲಿ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟು, ಕೆಲವರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ನಿನ್ನೆ ರಾತ್ರಿ ಮತ್ತೊಂದು ದುರಂತ ಸಂಭವಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ