ಬಾಣಸವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪವೊಂದರಲ್ಲಿ ಅಂಧರ್‍ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ

ಬೆಂಗಳೂರು, ಏ.15-ಬಾಣಸವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪವೊಂದರಲ್ಲಿ ಅಂಧರ್‍ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೆÇಲೀಸರು 24 ಮಂದಿ ಜೂಜುಕೋರರನ್ನು ಬಂಧಿಸಿ, 2.37,000 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರ್‍ಎಸ್ ಪಾಳ್ಯದ ಇಂಡಿಯನ್ ಆಯಿಲ್ ಸರ್ಕಲ್‍ನ ಮುನಿಸ್ವಾಮಪ್ಪ ರಸ್ತೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣಕ್ಕೊಡ್ಡಿ ಅಂದರ್-ಬಾಹರ್ ಇಸ್ಟೀಟ್ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೆÇಲೀಸರು ದಾಳಿ ನಡೆಸಿದರು.
ದಾಳಿ ವೇಳೆ ಒಟ್ಟು 24 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 2,37,000 ರೂ.ಗಳು, ಒಂದು ಚಾಪೆ ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಬಾಣಸವಾಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸಿಪಿ ಪಿ.ಟಿ.ಸುಬ್ರಹ್ಮಣ್ಯ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಎಸ್.ಮಲ್ಲಿಕಾರ್ಜುನ್ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು ಎಂದು ಪೆÇಲೀಸ್ ಆಯುಕ್ತರ ಕಚೇರಿ ತಿಳಿಸಿದೆ.
Áಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ