ಬೆಂಗಳೂರು,ಏ.16
ಬಾದಾಮಿ ಕ್ಷೇತ್ರತ ಅಭ್ಯರ್ಥಿಯನ್ನಾಗಿ ನಾಮ್ ಕೇ ವಾಸ್ತೆ ಎಂಬಂತೆ ದೇವರಾಜ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದ್ದರೂ, ಕೊನೆ ಕ್ಷಣಗಳಲ್ಲಿ ಬಾದಾಮಿ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರು ನಾಮಪಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ ಎನ್ನಲಾಗಿದೆ.
ಬಾದಾಮಿ ಕ್ಷೇತ್ರದ ಹಾಲಿ ಶಾಸಕ ಚಿಮ್ಮನಕಟ್ಟಿ ನೇತೃತ್ವದ ನಿಯೋಗ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಬದಾಮಿಯಿಂದ ಕಣಕ್ಕಿಳಿಯುವ ಸುಳಿವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ವರದಿಯಾಗಿದೆ.
ಸದ್ಯ ದೇವರಾಜ ಪಾಟೀಲ್ ಗೆ ಟಿಕೆಟ್ ನೀಡಿದ್ದೇವೆ. ಆದ್ರೆ ಅವರಿಗೆ ಬಿ ಫಾರಂ ನೀಡಲ್ಲ. ಒಂದೆರಡು ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಸಿದ್ದರಾಮಯ್ಯ ಸ್ಪರ್ಧಿಸುವುದಾದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ತಿಳಿಸಿದ್ದೆ. ಆದರೆ ದೇವರಾಜ ಪಾಟೀಲರಿಗೆ ಟಿಕೆಟ್ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ಮೋಸ ಮಾಡಿದ್ದಾರೆ ಎಂದು ಚಿಮ್ಮನಕಟ್ಟಿ ಆರೋಪಿಸಿದ್ದಾರೆ.