ಬೆಂಗಳೂರು, ಏ.16-ಜೀವನದಲ್ಲಿ ಜಿಗುಪ್ಸೆಗೊಂಡ ಎಸಿ ಟೆಕ್ನೀಷಿಯನ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಆಂಧ್ರದ ವಿಜಯವಾಡ ನಿವಾಸಿ ಜಾನಕಿರಾಮ್ (32) ಆತ್ಮಹತ್ಯೆ ಮಾಡಿಕೊಂಡಿರುವ ಟೆಕ್ನೀಷಿಯನ್.
ವರ್ತೂರಿನ ಟಿ.ಎಸ್.ಮ್ಯಾಕ್ಸ್ ಸ್ಪಿಂಕಲ್ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಸಂಬಂಧಿಕರ ಮನೆಯಲ್ಲಿ ಜಾನಕಿರಾಮ್ ವಾಸವಿದ್ದರು.
ಎಸಿ ಟೆಕ್ನೀಷಿಯನ್ ವೃತ್ತಿ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ಇವರು ತಮ್ಮ ರೂಮಿನಲ್ಲಿ ಬೆಡ್ಶಿಟ್ನಿಂದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದ ವರ್ತೂರು ಠಾಣೆ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಶವವನ್ನು ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.